ಆಂಧ್ರ ಪ್ರದೇಶದಲ್ಲಿ ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರು ದುರ್ಮಣ

Edited By:

Updated on: May 18, 2025 | 4:29 PM

ತೆಲಂಗಾಣದ ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಚಾರ್​ಮಿನಾರ್ (CharMinar)​ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದೆ. 8 ಕುಟುಂಬದ ಮಕ್ಕಳು ಸೇರಿದಂತೆ ಒಟ್ಟು 17 ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ. ಇದರ ಮಧ್ಯ ಆಂಧ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕಾರು ಬಾವಿಗೆ ಬಿದ್ದಿದ್ದು, ಈ ದುರ್ಘಟನೆಯಲ್ಲಿ ಕರ್ನಾಟಕ ಮೂವರು ಮೃತಪಟ್ಟಿದ್ದಾರೆ.

1 / 6
ಆಂಧ್ರ ಪ್ರದೇಶದಲ್ಲಿ ಕಾರು ಬಾವಿಗೆ ಉರುಳಿಬಿದ್ದಿದ್ದು, ಈ ಘಟನೆಯಲ್ಲಿ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ
ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ನಡೆದಿದೆ.

ಆಂಧ್ರ ಪ್ರದೇಶದಲ್ಲಿ ಕಾರು ಬಾವಿಗೆ ಉರುಳಿಬಿದ್ದಿದ್ದು, ಈ ಘಟನೆಯಲ್ಲಿ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ನಡೆದಿದೆ.

2 / 6

ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಮೃತರು. ಇನ್ನು ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.

3 / 6

ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದರು. ಆ ವೇಳೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿಯ ಬಾವಿಗೆ ಕಾರು ಬಿದ್ದಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ.

4 / 6

ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಚಿಂತಾಮಣಿ ಮೂಲಕ ಐವರು ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಬಚಾವ್ ಆಗಿದ್ದಾರೆ.

5 / 6

ಬಾವಿ ಆಳವಾಗಿದ್ದರಿಂದ ಕಾರೊನೊಳಗೆ ಮೂವರು ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸ್ಥಳೀಯರು, ಪೊಲೀಸರು ಸೇರಿ ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದರು.

6 / 6

ಮೊದಲಿಗೆ ಸ್ಥಳೀಯರು ಅಗ್ಗಗಳನ್ನು ಹಾಕಿ ಕಾರನ್ನು ಮೇಲೆತ್ತಲು ಪ್ರಯತ್ನಿಸಿದರು. ಆದ್ರೆ ಅದು ಸಾಧ್ಯವಾಗಿಲ್ಲ. ಬಳಿಕ ಕ್ರೇನ್​ ಮೂಲಕ ಬಾವಿಯೊಳಗಿದ್ದ ಕಾರನ್ನು ಹೊರತೆಗೆಲಾಯ್ತು.

Loading...
Unable to load recommendations.
Follow Us