ನಟ ಸಂಜಯ್ ದತ್ ಅವರು ಕನ್ನಡ ಚಿತ್ರರಂಗಕ್ಕೆ ಹತ್ತಿರವಾಗಿದ್ದಾರೆ. ಇಲ್ಲಿ ಅವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಸೃಷ್ಟಿ ಆಗಿದೆ. ‘ಕೆಡಿ’ ಸಿನಿಮಾದ ಶೂಟಿಂಗ್ ಸಲುವಾಗಿ ಬೆಂಗಳೂರಿಗೆ ಬಂದಿರುವ ಸಂಜಯ್ ದತ್ ಅವರು ಕನ್ನಡದ ಸೆಲೆಬ್ರಿಟಿಗಳ ಜತೆ ಪಾರ್ಟಿ ಮಾಡಿದ್ದಾರೆ.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಮೂಲಕ ಸಂಜಯ್ ದತ್ ಅವರು ಸ್ಯಾಂಡಲ್ವುಡ್ಗೆ ಕಾಲಿಟ್ಟರು. ಅವರು ನಟಿಸುತ್ತಿರುವ ಎರಡನೇ ಕನ್ನಡ ಸಿನಿಮಾ ‘ಕೆಡಿ’. ಈ ಚಿತ್ರಕ್ಕೆ ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ. ಪಾರ್ಟಿಯಲ್ಲಿ ಪ್ರೇಮ್ ಕೂಡ ಭಾಗಿ ಆಗಿದ್ದಾರೆ.
ನಟಿ ರಕ್ಷಿತಾ ಪ್ರೇಮ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಂಜಯ್ ದತ್ ಜೊತೆ ಪಾರ್ಟಿ ಮಾಡಿದ ಸಂದರ್ಭವನ್ನು ಅವರು ‘ಅತ್ಯಂತ ಸ್ಮರಣೀಯ ಕ್ಷಣ’ ಎಂದು ಬಣ್ಣಿಸಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.
ಸಂಜಯ್ ದತ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಖಳನಾಯಕ್ ಅಂತ ಕರೆಯುತ್ತಾರೆ. ಅದಕ್ಕೆ ತಕ್ಕಂತೆಯೇ ಅವರೀಗ ವಿಲನ್ ಪಾತ್ರಗಳ ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ‘ಕೆಡಿ’ ಸಿನಿಮಾದಲ್ಲಿ ಅವರ ಪಾತ್ರ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.
ಪ್ರೇಮ್, ರಕ್ಷಿತಾ, ‘ಏಕ್ ಲವ್ ಯಾ’ ನಟ ರಾಣಾ, ‘ಬನಾರಸ್’ ಸಿನಿಮಾ ಖ್ಯಾತಿಯ ಝೈದ್ ಖಾನ್ ಸೇರಿದಂತೆ ಅನೇಕರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ. ಸಂಜಯ್ ದತ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಎಲ್ಲರೂ ಖುಷಿಪಟ್ಟಿದ್ದಾರೆ.
Published On - 4:58 pm, Sun, 5 February 23