Updated on: Jan 09, 2023 | 9:50 AM
ನಟಿ ಕೀರ್ತಿ ಸುರೇಶ್ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡು ಆಗಾಗ ವಿದೇಶಕ್ಕೆ ಹಾರುತ್ತಾರೆ.
ಈಗ ಕೀರ್ತಿ ಸುರೇಶ್ ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ. ಬೋಲ್ಡ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
ಕೀರ್ತಿ ಸುರೇಶ್ ಅವರು ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2018ರಲ್ಲಿ ತೆರೆಗೆ ಬಂದ ‘ಮಹಾನಟಿ’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.
‘ಸರ್ಕಾರು ವಾರಿ ಪಾಟ’ ಸಿನಿಮಾ 2022 ರಿಲೀಸ್ ಆಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ಸದ್ಯ ನಾಲ್ಕು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.
ಕೀರ್ತಿ ಸುರೇಶ್ ಅವರು ಇನ್ಸ್ಟಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 1.4 ಕೋಟಿ ಹಿಂಬಾಲಕರಿದ್ದಾರೆ.