
ನಟಿ ಶ್ರೀನಿಧಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

ಶ್ರೀನಿಧಿ ಶೆಟ್ಟಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಸಿನಿಮಾಗಳ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

ಶ್ರೀನಿಧಿ ಶೆಟ್ಟಿ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾರೆ.

ಈಗ ಶ್ರೀನಿಧಿ ಶೆಟ್ಟಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಅವರ ಕ್ಯೂಟ್ ಲುಕ್ ಗಮನ ಸೆಳೆದಿದೆ.

ಶ್ರೀನಿಧಿ ಶೆಟ್ಟಿ ಅವರ ಖ್ಯಾತಿ ‘ಕೆಜಿಎಫ್ 2’ ಬಳಿಕ ಹೆಚ್ಚಾಯಿತು. ಇದಾದ ಬಳಿಕ ಅವರು ತಮಿಳಿನ ಒಂದು ಸಿನಿಮಾದಲ್ಲಿ ನಟಿಸಿದ್ದು ಬಿಟ್ಟರೆ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ಸಂಭಾವನೆ ಹೆಚ್ಚಿಸಿಕೊಂಡಿರುವುದರಿಂದ ಶ್ರೀನಿಧಿ ಶೆಟ್ಟಿಗೆ ಹೊಸ ಸಿನಿಮಾ ಸಿಗುತ್ತಿಲ್ಲ ಎನ್ನುವ ಮಾತಿದೆ. ಆದರೆ, ಇದು ಅಧಿಕೃತ ಅಲ್ಲ.