- Kannada News Photo gallery KGF Chapter 2 star Yash and his wife Radhika Pandit meet Goa CM Pramod Sawant
ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ ಮಾಡಿದ ಯಶ್-ರಾಧಿಕಾ ಪಂಡಿತ್; ಮುಂದಿನ ಸಿನಿಮಾ ಬಗ್ಗೆ ಕುತೂಹಲ
ಪಣಜಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಯಶ್ ಹಾಗೂ ರಾಧಿಕಾ ಪಂಡಿತ್ ಭೇಟಿ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Updated on: May 04, 2022 | 1:06 PM

KGF Chapter 2 star Yash and his wife Radhika Pandit meet Goa CM Pramod Sawant

KGF Chapter 2 star Yash and his wife Radhika Pandit meet Goa CM Pramod Sawant

‘ಕೆಜಿಎಫ್ ಸಿನಿಮಾದ ಸೂಪರ್ ಸ್ಟಾರ್ ನಟ ಯಶ್ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್ ಅವರನ್ನು ಭೇಟಿಯಾಗಿದ್ದು ಖುಷಿ ನೀಡಿತು’ ಎಂಬ ಕ್ಯಾಪ್ಷನ್ನೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್ ಫ್ಯಾನ್ಸ್ ಈ ಫೋಟೋಗಳನ್ನು ಲೈಕ್ ಮಾಡಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ಕೊಣಂಕಿ ಅವರು ಕೂಡ ಹಾಜರಿದ್ದರು. ಫೋಟೋದಲ್ಲಿ ಅವರನ್ನು ಗಮನಿಸಿದ ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡಿದೆ. ಯಶ್ ಮುಂದಿನ ಸಿನಿಮಾಗೂ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಗೂ ಏನಾದರೂ ಲಿಂಕ್ ಇದೆಯೇ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುತ್ತ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಮುನ್ನುಗ್ಗುತ್ತಿದೆ. ಯಶ್ ನಟಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ.



















