
ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ನಡೆದು ಒಂದು ವಾರದ ಮೇಲಾಗಿದೆ. ಈಗಲೂ ದಂಪತಿಗಳು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ಕಿಯಾರಾ ಅವರು ಮದುವೆ ಸಂದರ್ಭದಲ್ಲಿ ಲೆಂಹೆಂಗಾ ತೊಟ್ಟಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಸಾಕಷ್ಟು ಅದ್ದೂರಿಯಾಗಿ ನೆರವೇರಿದೆ. ಈ ವಿವಾಹಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಆಪ್ತರ ಸಮ್ಮುಖದಲ್ಲಿ ಮದುವೆ ಕಾರ್ಯ ನಡೆದಿದೆ.

ಕಿಯಾರಾ ಹಾಗೂ ಸಿದ್ದಾರ್ಥ್ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಅವರು ತಮ್ಮ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಈ ದಂಪತಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ. ಇದಕ್ಕೆ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.