- Kannada News Photo gallery Kannada News - Kichcha Sudeep Visits union Minister of Parliamentary Affairs Minister Pralhad Joshi house
ದೆಹಲಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿವಾಸಕ್ಕೆ ಸುದೀಪ್ ಭೇಟಿ; ಇಲ್ಲಿವೆ ಫೋಟೋಗಳು
Kichcha Sudeep | Pralhad Joshi - ಇಂದು ಬೆಳಗ್ಗೆ ಪ್ರಲ್ಹಾದ ಜೋಶಿ ಅವರ ನಿವಾಸಕ್ಕೆ ಸುದೀಪ್ ತೆರಳಿದ್ದಾರೆ. ಕೇಂದ್ರ ಸಚಿವರ ಜೊತೆ ಅವರು ಉಪಹಾರ ಸೇವಿಸಿದ್ದಾರೆ. ಆ ಬಳಿಕ ಸಿನಿಮಾ ಪ್ರಚಾರಕ್ಕೆ ಸುದೀಪ್ ತೆರಳಿದ್ದಾರೆ. ಇಂಡಿಯಾ ಗೇಟ್ ಬಳಿ ಸುದೀಪ್ ಪ್ರಚಾರ ಆರಂಭಿಸಿದ್ದಾರೆ.
Updated on:Jul 16, 2022 | 12:39 PM

ಕಿಚ್ಚ ಸುದೀಪ್ ಅವರು ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ಇಂದು (ಜುಲೈ 16) ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಬೆಳಗ್ಗೆ ಪ್ರಲ್ಹಾದ ಜೋಶಿ ಅವರ ನಿವಾಸಕ್ಕೆ ಸುದೀಪ್ ತೆರಳಿದ್ದಾರೆ. ಕೇಂದ್ರ ಸಚಿವರ ಜೊತೆ ಅವರು ಉಪಹಾರ ಸೇವಿಸಿದ್ದಾರೆ. ಆ ಬಳಿಕ ಸಿನಿಮಾ ಪ್ರಚಾರಕ್ಕೆ ಸುದೀಪ್ ತೆರಳಿದ್ದಾರೆ. ಇಂಡಿಯಾ ಗೇಟ್ ಬಳಿ ಸುದೀಪ್ ಪ್ರಚಾರ ಆರಂಭಿಸಿದ್ದಾರೆ.

ಪ್ರಲ್ಹಾದ ಜೋಶಿ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ನಟ ಸುದೀಪ್ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು’ ಎಂದಿದ್ದಾರೆ ಅವರು.

‘13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಬಹುಭಾಷಾ ನಟರಾಗಿ ಮಿಂಚುತ್ತಿರುವ ಅವರ ಯಶಸ್ಸು ಸಿನಿಮಾ ರಂಗದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ’ ಎಂದಿದ್ದಾರೆ ಪ್ರಲ್ಹಾದ್ ಜೋಶಿ.

‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ, ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ.
Published On - 11:28 am, Sat, 16 July 22




