AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ವಿಚಾರದಲ್ಲಿ ಜಟಾಪಟಿ: ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ಜತೆ ಸಿದ್ದರಾಮಯ್ಯ ಆತ್ಮೀಯ ಕುಶಲೋಪರಿ!

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳು, ಶೆಡ್​ಗಳ ತೆರವು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ವಾಗ್ದಾಳಿ ನಡೆಸಿದ್ದರು. ಆದರೆ, ಸರ್ಕಾರದ ಕ್ರಮವನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡು ಕೇರಳ ಸಿಎಂಗೆ ತಿರುಗೇಟು ನೀಡಿದ್ದರು. ಅದಾದ ನಂತರ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆಗಳನ್ನು ನೀಡಲು ಸರ್ಕಾರ ಮುಂದಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ಸಂದರ್ಭದಲ್ಲಿ ಕೇರಳ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ತಿರುವನಂತಪುರದಲ್ಲಿ ಭೇಟಿಯಾಗಿದ್ದಾರೆ.

Ganapathi Sharma
|

Updated on: Dec 31, 2025 | 11:48 AM

Share
ಕೇರಳದ ವರ್ಕಳದಲ್ಲಿ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ರಾಜಧಾನಿ ತಿರುವನಂತಪುರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯಿ ವಿಜಯನ್​​ರನ್ನು ಭೇಟಿಯಾಗಿ ಆತ್ಮೀಯವಾಗಿ ಮಾತನಾಡಿದರು.

1 / 6
ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಉಪಸ್ಥಿತರಿದ್ದರು. ಈ ವೇಳೆ ವೇದಿಕೆಯಲ್ಲಿ ಪಿಣರಾಯಿ ವಿಜಯನ್​​​​, ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

2 / 6
ಕೇರಳದ ವರ್ಕಳದಲ್ಲಿ ನಡೆಯಲಿರುವ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಬ್ರಹ್ಮಶ್ರೀ ಜ್ಞಾನತೀರ್ಥ ಸ್ವಾಮೀಜಿಯವರು ಹಾಗೂ ಗುರುಗಳ ಅನುಯಾಯಿಗಳಿಂದ ದೊರೆತ ಆತ್ಮೀಯ ಸ್ವಾಗತದಿಂದ ಹರ್ಷಿತನಾದೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

3 / 6
ಒಂದು ಕಾಲದಲ್ಲಿ ಜಾತಿಯಾಧಾರಿತ ಶೋಷಣೆ, ಅಸಮಾನತೆಗಳಿಂದ ನರಳುತ್ತಿದ್ದ ಕೇರಳದಲ್ಲಿ ಸಮಾನತೆಯ ಬೆಳಕು ಹರಿಸಿದ ನಾರಾಯಣ ಗುರುಗಳು ನಡೆದಾಡಿದ ನೆಲದಲ್ಲಿ ಜರುಗಲಿರುವ ಯಾತ್ರಾರ್ಥಿಗಳ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾನು ಕಾತುರನಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

4 / 6
ಕೇರಳದ ಶಿವಗಿರಿ ಮಠದಲ್ಲಿ ಆಯೋಜಿಸಿರುವ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಸಮಸಮಾಜದ ಕನಸು ಬಿತ್ತಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ಸ್ಥಳಕ್ಕೆ ಭೇಟಿನೀಡಿ, ಗುರುಗಳಿಗೆ ನಮಿಸಿದೆ ಎಂದು ಸಿದ್ದರಾಮಯ್ಯ ಎಕ್ಸ್​ ಸಂದೇಶದಲ್ಲಿ ತಿಳಿಸಿದ್ದಾರೆ.

5 / 6
ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ  ಕೆಸಿ ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ವೇಳೆ ಹಾಜರಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

6 / 6
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?

ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?

ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್

ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ

‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್

ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು

ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!