Updated on: Nov 26, 2023 | 8:32 AM
ಕೋಲಾರದಲ್ಲಿ ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ 40 ಕೊಲೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು.
ಸಚಿವರ ಮತ್ತು ಶಾಸಕರ ಕ್ಲಾಸ್ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವರ ಮೇಲೆ ನಿಗಾ ಇರಿಸಿದೆ.
ಕೋಲಾರ ಜಿಲ್ಲೆಯಾದ್ಯಂತ ಎಸ್ಪಿ ನಾರಾಯಣ್ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.
ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ರಾತ್ರಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ವಿಚಾರಣೆ ನಡೆಸಿದರು.
ರಾತ್ರಿ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಮದ್ಯಪಾನ ತಪಾಸಣೆ ನಡೆಸಿದರು.
ಜಿಲ್ಲೆಯಲ್ಲಿ ಇತ್ತೀಚಿಗೆ ಮಾದಕ ವಸ್ತುಗಳು ಹೇರಳವಾಗಿ ದೊರೆಯುತ್ತಿದ್ದು, ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾತ್ರಿ ಓಡಾಟ ನಡೆಸುತ್ತಿದ್ದ ಕಾರುಗಳನ್ನು ತಡೆದು ಪರಿಶೀಲನೆ ನಡೆಸಿದರು.