AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಸಿದ್ದೇಶ್ವರ ಜಾತ್ರಾ ಮಹಾದಾಸೋಹದಲ್ಲಿ ಸಾವಯವ ಬೆಲ್ಲದಿಂದ 14 ಲಕ್ಷ ಜಿಲೇಬಿ ತಯಾರು

ಕೊಪ್ಪಳದ ಗವಿಮಠ ಜಾತ್ರೆಗೆ ಬರುವ ಲಕ್ಷಾಂತರ ಭಕ್ತರು ಜಿಲೇಬಿ ಸವಿಯಲಿದ್ದಾರೆ. ರಾಯಚೂರಿನ ಸಿಂಧನೂರಿನ ವಿಜಯಕುಮಾರ್ ಮತ್ತು ಅವರ ತಂಡ ಜಿಲೇಬಿ ತಯಾರಿಸುತ್ತಿದೆ. 12-14 ಲಕ್ಷ ಜಿಲೇಬಿಗಳನ್ನು ತಯಾರಿಸಲಾಗುತ್ತಿದೆ. 50 ಕ್ವಿಂಟಲ್ ಹಿಟ್ಟು, 130 ಕ್ವಿಂಟಲ್ ಬೆಲ್ಲ, ಹಾಗೂ ಇತರ ಅನೇಕ ಪದಾರ್ಥಗಳನ್ನು ಬಳಸಲಾಗುತ್ತಿದೆ. 120 ಬಾಣಸಿಗರು ಮತ್ತು 150 ಸಹಾಯಕರು ಈ ದೊಡ್ಡ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on:Jan 15, 2025 | 7:44 AM

Share
ದಕ್ಷಿಣ ಭಾರತದ ಕುಂಭಮೇಳವೆಂದೆ ಪ್ರಖ್ಯಾತಿ ಪಡೆದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ. ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ನಾಡಿನ ಅನೇಕ ಭಕ್ತರು ವಿವಿಧ ವಿಶಿಷ್ಟ ಭಕ್ತಿ ಸೇವೆಗಳನ್ನು ಸಲ್ಲಿಸುವುದರ ಮೂಲಕ ಭಕ್ತಿ ಅರ್ಪಿಸುವದು ಅಪ್ಯಾಯಮಾನ.

1 / 6
ರಾಯಚೂರು ಜಿಲ್ಲೆಯ ಸಿಂಧನೂರಿನ ವಿಜಯಕುಮಾರ್ ಹಾಗೂ ಗೆಳೆಯರ ಬಳಗದ ಹತ್ತು ಜನರ ತಂಡ ನಿರಂತರವಾಗಿ ಸಮಾಜ ಸೇವೆ ಕಾರ್ಯವನ್ನು ಮಾಡುತ್ತಿದ್ದು, ಪ್ರತಿ ವರ್ಷವೂ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಸೇವೆ ಮಾಡಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೆಳೆಯರ ಬಳಗ ವಿಶೇಷವಾಗಿ ಮಹಾದಾಸೋಹಕ್ಕೆ ಸೇವೆಯನ್ನು ಸಲ್ಲಿಸುತ್ತಿದೆ.

2 / 6
ಬುಧವಾರ ಜನವರಿ15 ರಥೋತ್ಸವ ಹಾಗೂ 16ರಿಂದ ಎರಡು ದಿನಗಳ ಕಾಲ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಜಿಲೇಬಿಯನ್ನು ತಯಾರು ಮಾಡಿ ಬಡಿಸುವ ಸೇವಾ ಕೈಂಕರ್ಯಕ್ಕೆ ಮುಂದಾಗಿದೆ. ಈ ತಂಡ ಈಗಾಗಲೇ ಜಿಲೇಬಿ ತಯಾರು ಮಾಡುವ ಸೇವೆಯಲ್ಲಿ ತೊಡಗಿಸಿಕೊಂಡಿದೆ.

3 / 6
ಜಿಲೇಬಿ ತಯಾರಿಕೆಗೆ ಸುಮಾರು 50 ಕ್ವಿಂಟಲ್ ಮೈದಾ ಹಿಟ್ಟು, 130 ಕ್ವಿಂಟಲ್ ಸಾವಯವ ಬೆಲ್ಲ, 1600 ಲೀಟರ್ ಎಣ್ಣೆ, 300 ಲೀಟರ್ ತುಪ್ಪ, 20 ಕೆಜಿ ಯಾಲಕ್ಕಿ, 150 ಲೀಟರ್ ಮೊಸರನ್ನು ಬಳಸಲಾಗಿದೆ.

4 / 6
ಕಳೆದ ಎರಡು ದಿನಗಳ ಕಾಲ ಸುಮಾರು 450 ಕ್ವಿಂಟಲ್ ಜಿಲೇಬಿಯನ್ನು ತಯಾರಿಸಲಾಗಿ. ಸುಮಾರು 12 ರಿಂದ 14 ಲಕ್ಷ ಜಿಲೇಬಿ ತಯಾರಾಗಬಹುದು ಎಂದು ಬಾಣಸಿಗರು ಹೇಳಿದ್ದಾರೆ. ಜಿಲೇಬಿ ಮಾಡುವ ಕಾರ್ಯಕ್ಕೆ 120 ಬಾಣಸಿಗರು, ಅವರಿಗೆ ಸಹಾಯ ಮಾಡಲು 150 ಜನ ಹಾಗೂ ಕಾರ್ಯಕರ್ತರು ನಿರಂತರವಾಗಿ ಸೇವೆಯನ್ನು ಮಾಡುತ್ತಿದ್ದಾರೆ.

5 / 6
ಈ ಜಿಲೇಬಿಗಳನ್ನು ತಯಾರಿಸಿದ ನಂತರ ವ್ಯವಸ್ಥಿತವಾಗಿಡಲು 1300 ಟ್ರೇಗಳನ್ನು ಸಿಂಧನೂರಿನ ಮಹಾನಂದಿ ಪ್ಲಾಸ್ಟಿಕ್ ಮಾಲೀಕರಾದ ಲಕ್ಷ್ಮಣ್ ಶೆಟ್ಟಿ ಅವರು ಉಚಿತವಾಗಿ ನೀಡಿದ್ದಾರೆ. ಈ ಎರಡು ದಿನಗಳ ಕಾಲ ಜಾತ್ರಾ ಮಹಾ ದಾಸೋಹದಲ್ಲಿ ಜಾತ್ರೆಗೆ ಆಗಮಿಸಿದ ಭಕ್ತರು ಜಿಲೇಬಿಯನ್ನು ಸವಿಯಲಿದ್ದಾರೆ.

6 / 6

Published On - 7:41 am, Wed, 15 January 25

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್