ರಾಯಚೂರು: ಸೇತುವೆ ಕಾಮಗಾರಿ ವೇಳೆ ನದಿಯಲ್ಲಿ ಕೃಷ್ಣನ ವಿಗ್ರಹ, ಶಿವಲಿಂಗ ಪತ್ತೆ
ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ. ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.
Updated on:Feb 06, 2024 | 8:21 AM

ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ.

ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

ಕೃಷ್ಣಾ ನದಿಯಲ್ಲಿ ಶ್ರೀಕೃಷ್ಣನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ಪತ್ತೆಯಾಗಿದೆ. ಈ ವಿಗ್ರಹಗಳನ್ನು ಸಿಬ್ಬಂದಿ ಸುರಕ್ಷಿತವಾಗಿ ನದಿಯಿಂದ ಹೊರತೆಗೆದಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪುರಾತತ್ವ ಇಲಾಖೆಗೆ ಸಿಬ್ಬಂದಿ ವಿಗ್ರಹಗಳನ್ನು ಪರಿಶೀಲಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ.

ದೇವಸ್ಥಾನಗಳ ಧ್ವಂಸದ ವೇಳೆ ಮತಾಂದರ ಕೈಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ಅಂದಿನ ಜನರು ವಿಗ್ರಹಗಳನ್ನು ನದಿಯಲ್ಲಿ ಮುಳುಗಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಹಿಂದೆ ಇಲ್ಲಿ ಅನೇಕ ರಾಜ ಮನೆತನಗಳಿದ್ದವು. ರಾಯಚೂರು ಭಾಗದಲ್ಲಿ ಬರೊಬ್ಬರಿ 163 ಯುದ್ಧಗಳು ನಡೆದಿವೆ. ಬಹುಮನಿಸುಲ್ತಾನರು ಹಾಗೂ ಆದಿಲ್ ಶಾಹಿಗಳ ದಾಳಿಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ನದಿಗೆ ಹಾಕಲಾಗಿದೆ.

ಈ ವಿಗ್ರಹಗಳ ಬಗ್ಗೆ ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಮಾತನಾಡಿ, ಬಹುಮನಿ ಸುಲ್ತಾನರ ಅವಧಿಯಲ್ಲಿ ಗರ್ಭ ಗುಡಿಯಲ್ಲಿ ಮೂರ್ತಿಗಳನ್ನು ಕೃಷ್ಣಾ ನದಿಗೆ ಬೀಸಾಡಿರಬಹುದು. ಇದೀಗ ಕಾಮಗಾರಿ ವೇಳೆ ವಿಗ್ರಹಗಳು ದೊರೆತಿವೆ.

ಸದ್ಯ ದೊರೆತದ್ದು ಹಸಿರು ಮಿಶ್ರಿತ ಶಿಲೆ. ಈ ಮಾದರಿಯ ಶಿಲೆಗಳನ್ನು ಕಲ್ಯಾಣ ಚಾಲುಕ್ಯರು ಬಳಸುತ್ತಿದ್ದರು.

ಹೀಗಾಗಿ ಈ ವಿಗ್ರಹಗಳು 11ನೇ ಶತಮಾನದ ಕಲ್ಯಾಣ ಚಾಲುಕ್ಯರಿಗೆ ಸೇರಿವೆ ಎಂದು ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಹೇಳಿದ್ದಾರೆ. ಅಲ್ಲದೆ ಈ ಬಗ್ಗೆ ಸಂಶೋಧನೆ ನಡೆಸಬೇಕಿದೆ ಎಂದರು.
Published On - 8:17 am, Tue, 6 February 24



















