
‘ಆದಿಪುರುಷ್’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್ ಅವರು ಸೀತೆಯ ಪಾತ್ರ ಮಾಡಿದ್ದಾರೆ.

ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್’ ಸಿನಿಮಾದಲ್ಲಿ ಕೃತಿ ಸನೋನ್ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಓಂ ರಾವತ್ ಅವರು ‘ಆದಿಪುರುಷ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್ ಆಗಿದೆ.