KSRTC: ತಿಂಗಳಾಂತ್ಯಕ್ಕೆ ರಸ್ತೆಗೆ ಇಳಿಯಲಿವೆ ಐರಾವತ ಕ್ಲಬ್ ಕ್ಲಾಸ್ 2.0 ಬಸ್ಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ)ಯ ಹೊಸ 20 ಬಸ್ಸುಗಳು ಈ ತಿಂಗಳ ಕೊನೆಯ ವಾರದಲ್ಲಿ ನಿಗಮಕ್ಕೆ ಸೇರ್ಪಡೆಗೊಳ್ಳಲಿವೆ. ಒಂದು ಬಸ್ಸಿನ ದರ ರೂ.1.78 ಕೋಟಿ ರೂಪಾಯಿ ಆಗಿದೆ.
Updated on:Oct 08, 2024 | 7:47 AM

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ರಸ್ತೆಗೆ ಇಳಿಸುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಕೆಎಸ್ಆರ್ಟಿಸಿ ಬಸ್ಗಳು ದೇಶದಲ್ಲೇ ಅತ್ಯಂತ ಆಕರ್ಷಣೀಯ ಬಸ್ಗಳಾಗಿವೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ)ಯ ಹೊಸ 20 ಬಸ್ಸುಗಳು ಈ ತಿಂಗಳ ಕೊನೆಯ ವಾರದಲ್ಲಿ ಸೇರ್ಪಡೆಗೊಳ್ಳಲಿವೆ. ಒಂದು ಬಸ್ಸಿನ ದರ ರೂ.1.78 ಕೋಟಿ ರೂಪಾಯಿ ಆಗಿದೆ.

ಕೆಎಸ್ಆರ್ಟಿಸಿ ನಿಗಮದಲ್ಲಿ ಒಟ್ಟು 443 ಐಷಾರಾಮಿ ಬಸ್ಸುಗಳಿದ್ದು, ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ ಬಸ್ಗಳು ಹೆಚ್ಚು ವಿಶೇಷತೆ ಹೊಂದಿವೆ. ಈ ಬಸ್ಸಿನಲ್ಲಿ ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿದೆ.

ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. ಉಳಿದ ಬಸ್ಗಳಿಗಿಂತ ಈ ಹೊಸ ಬಸ್ಸಿನ ಉದ್ದ ಶೇ3.5 ರಷ್ಟು ಮತ್ತು ಎತ್ತರದಲ್ಲಿ ಶೇ5.6 ಹೆಚ್ಚಳ ಇರುವುದರಿಂದ ಸೀಟ್ಗಳ ನಡುವಿನ ಅಂತರ ಮತ್ತು ಹೆಚ್ಚಿನ ಹೆಡ್ ರೂಂ ಇರುತ್ತದೆ. ಜೊತೆಗೆ USB+ C ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಉತ್ತಮ ಎಸಿ, ಫೈರ್ ಅಲಾರ್ಮ್, ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.

ಈ ನೂತನ ಬಸ್ಗಳನ್ನು ಸಾರಿಗೆ ಸಚಿವ ರಾಮಲಿಂಗರೆಡ್ಡಿ,KSRTC ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ ಅವರು ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ಪರಿವೀಕ್ಷಿಸಿದರು.
Published On - 7:47 am, Tue, 8 October 24

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ
Read More



