AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೆಂಪು ಜನ್ಮದಿನ: ಇಲ್ಲಿದೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಪುಟ್ಟಪ್ಪನವರ ಬಗ್ಗೆ ನಿಮಗೆ ಗೊತ್ತಿಲ್ಲದ ಮಾಹಿತಿ

Kuvempu Birth Anniversary: ಇಂದು(ಡಿ. 29) ಕರ್ನಾಟಕದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಜನ್ಮದಿನ. ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಇವರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

TV9 Web
| Edited By: |

Updated on:Dec 29, 2022 | 10:52 AM

Share
ಇಂದು(ಡಿ. 29) ಕರ್ನಾಟಕದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಜನ್ಮದಿನ. ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಇವರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

ಇಂದು(ಡಿ. 29) ಕರ್ನಾಟಕದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಜನ್ಮದಿನ. ಇವರ ಪೂರ್ಣ ಹೆಸರು ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ. ಇವರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

1 / 8
ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್, 29 1904 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢಶಾಲಾ ಶಿಕ್ಷಣದಿಂದ ಹಿಡಿದು ಎಂಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು.

2 / 8
ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಈ ಕಾಲಕ್ಕೆ ಅಗತ್ಯವಾದ ಸಂದೇಶವನ್ನು ನೀಡಿದ್ದಾರೆ.

3 / 8
ಕುವೆಂಪುರವರ ಪ್ರಮುಖ ಎರಡು ಕಾದಂಬರಿಗಳಾದ 'ಕಾನೂರು ಹೆಗ್ಗಡತಿ' ಹಾಗೂ 'ಮಲೆಗಳಲ್ಲಿ ಮದುಮಗಳು' ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ.

4 / 8
ಬಾರಿಸು ಕನ್ನಡ ಡಿಂಡಿಮವ ಎನ್ನುವ ಮೂಲಕ ಕನ್ನಡಕ್ಕೆ ಅದ್ಭುತವಾದ ಹಾಡನ್ನು ಕೊಟ್ಟು ಜೈ ಭಾರತ ಜನನಿಯ ಎಂಬ ಅರ್ಥ ಪೂರ್ಣವಾದ ನಾಡಗೀತೆಯಾಗಿ ನೀಡಿದ ವಿಶ್ವಮಾನವ ಕವಿ.

5 / 8
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ.

6 / 8
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

7 / 8
ಕುಪ್ಪಳಿಯು ಶಿವಮೊಗ್ಗದಿಂದ 80 ಕಿ.ಮೀ ದೂರದಲ್ಲಿದೆ ಹಾಗೂ ತೀರ್ಥಹಳ್ಳಿಯಿಂದ 10 ಕಿ.ಮೀ ದೂರದಲ್ಲಿದೆ. ಕುವೆಂಪು ರಾಷ್ಟೀಯ ಪ್ರತಿಷ್ಠಾನ ಇವರ ಮನೆಯನ್ನು ಕವಿಮನೆ ಹೆಸರಿನ ಮ್ಯೂಸಿಯಂ ಮಾಡಿದ್ದಾರೆ. ಮನೆಯ ಮೂಲ ಸ್ವರೂಪವನ್ನು ಕಾಯ್ದುಕೊಂಡು ನವೀಕರಿಸಿ ಮ್ಯೂಸಿಯಮ್ ಆಗಿ ಪರಿವರ್ತಿಸಿಲಾಗಿದೆ.

8 / 8

Published On - 10:51 am, Thu, 29 December 22