ಕುವೆಂಪು ಜನ್ಮದಿನ: ಇಲ್ಲಿದೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಪುಟ್ಟಪ್ಪನವರ ಬಗ್ಗೆ ನಿಮಗೆ ಗೊತ್ತಿಲ್ಲದ ಮಾಹಿತಿ
TV9 Web | Updated By: Digi Tech Desk
Updated on:
Dec 29, 2022 | 10:52 AM
Kuvempu Birth Anniversary: ಇಂದು(ಡಿ. 29) ಕರ್ನಾಟಕದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಜನ್ಮದಿನ. ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಇವರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
1 / 8
ಇಂದು(ಡಿ. 29) ಕರ್ನಾಟಕದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಜನ್ಮದಿನ. ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಇವರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
2 / 8
ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್, 29 1904 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢಶಾಲಾ ಶಿಕ್ಷಣದಿಂದ ಹಿಡಿದು ಎಂಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು.
3 / 8
ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಈ ಕಾಲಕ್ಕೆ ಅಗತ್ಯವಾದ ಸಂದೇಶವನ್ನು ನೀಡಿದ್ದಾರೆ.
4 / 8
ಕುವೆಂಪುರವರ ಪ್ರಮುಖ ಎರಡು ಕಾದಂಬರಿಗಳಾದ 'ಕಾನೂರು ಹೆಗ್ಗಡತಿ' ಹಾಗೂ 'ಮಲೆಗಳಲ್ಲಿ ಮದುಮಗಳು' ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ.
5 / 8
ಬಾರಿಸು ಕನ್ನಡ ಡಿಂಡಿಮವ ಎನ್ನುವ ಮೂಲಕ ಕನ್ನಡಕ್ಕೆ ಅದ್ಭುತವಾದ ಹಾಡನ್ನು ಕೊಟ್ಟು ಜೈ ಭಾರತ ಜನನಿಯ ಎಂಬ ಅರ್ಥ ಪೂರ್ಣವಾದ ನಾಡಗೀತೆಯಾಗಿ ನೀಡಿದ ವಿಶ್ವಮಾನವ ಕವಿ.
6 / 8
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ.
7 / 8
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.
8 / 8
ಕುಪ್ಪಳಿಯು ಶಿವಮೊಗ್ಗದಿಂದ 80 ಕಿ.ಮೀ ದೂರದಲ್ಲಿದೆ ಹಾಗೂ ತೀರ್ಥಹಳ್ಳಿಯಿಂದ 10 ಕಿ.ಮೀ ದೂರದಲ್ಲಿದೆ. ಕುವೆಂಪು ರಾಷ್ಟೀಯ ಪ್ರತಿಷ್ಠಾನ ಇವರ ಮನೆಯನ್ನು ಕವಿಮನೆ ಹೆಸರಿನ ಮ್ಯೂಸಿಯಂ ಮಾಡಿದ್ದಾರೆ. ಮನೆಯ ಮೂಲ ಸ್ವರೂಪವನ್ನು ಕಾಯ್ದುಕೊಂಡು ನವೀಕರಿಸಿ ಮ್ಯೂಸಿಯಮ್ ಆಗಿ ಪರಿವರ್ತಿಸಿಲಾಗಿದೆ.
Published On - 10:51 am, Thu, 29 December 22