ಬಗೆಬಗೆಯ ಕಾಸ್ಟ್ಯೂಮ್ನಲ್ಲಿ ಮಿಂಚಿದ ಕರೀನಾ ಕಪೂರ್; ಇಲ್ಲಿವೆ ಕಲರ್ಫುಲ್ ಫೋಟೋಗಳು
ನಟಿ ಕರೀನಾ ಕಪೂರ್ ಖಾನ್ ಅವರು ಮಕ್ಕಳ ಆರೈಕೆಯ ಜೊತೆಗೆ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಅವರ ಕೆಲವು ರಂಗುರಂಗಿನ ಫೋಟೋಗಳು ಇಲ್ಲಿವೆ..
Updated on: Mar 04, 2022 | 11:47 AM

Laal Singh Chaddha actress Kareena Kapoor Khan latest photos

Laal Singh Chaddha actress Kareena Kapoor Khan latest photos

ಸೈಫ್ ಅಲಿ ಖಾನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರವೂ ಕರೀನಾ ಕಪೂರ್ ಅವರು ನಟನೆಯಿಂದ ದೂರ ಉಳಿದುಕೊಂಡಿಲ್ಲ. ತಮಗೆ ಇಷ್ಟ ಆಗುವ ಸಿನಿಮಾ ಮತ್ತು ಪಾತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಆ ಮೂಲಕ ಚಿತ್ರರಂಗದಲ್ಲಿ ಸಕ್ರಿಯ ಆಗಿದ್ದಾರೆ.

ಆಮಿರ್ ಖಾನ್ ಜೊತೆ ಕರೀನಾ ಕಪೂರ್ ಖಾನ್ ಅಭಿನಯಿಸಿರುವ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆಗಸ್ಟ್ 11ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಹಾಲಿವುಡ್ನ ‘ಫಾರೆಸ್ಟ್ ಗಂಪ್’ ಚಿತ್ರದ ಹಿಂದಿ ರಿಮೇಕ್ ಆಗಿ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ಆಮಿರ್ ಖಾನ್ಗೆ ಜೋಡಿ ಆಗಿರುವ ಕರೀನಾ ಕಪೂರ್ ಅವರು ಗರ್ಭಿಣಿ ಗೆಟಪ್ನಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಕರೀನಾ ಕಪೂರ್ ಅವರು ಆ್ಯಕ್ಟೀವ್ ಆಗಿರುತ್ತಾರೆ. ಆಗಾಗ ವಿಶೇಷವಾದ ಫೋಟೋಶೂಟ್ ಮಾಡಿಸಿ ಬಗೆಬಗೆಯ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಆ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇರುತ್ತಾರೆ. ಸದ್ಯ ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 87 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.



















