Updated on: Mar 04, 2022 | 11:47 AM
ಖ್ಯಾತ ನಟಿ ಕರೀನಾ ಕಪೂರ್ ಖಾನ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 2 ದಶಕ ಕಳೆದಿದೆ. ಈಗಲೂ ಅವರು ಅದೇ ಚಾರ್ಮ್ ಉಳಿಸಿಕೊಂಡಿದ್ದಾರೆ. ಅವರ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಹಿಂದಿ ಚಿತ್ರರಂಗದಲ್ಲಿ ಕರೀನಾ ಕಪೂರ್ ಖಾನ್ ಅವರಿಗೆ ಸಖತ್ ಡಿಮ್ಯಾಂಡ್ ಇದೆ. ಇತ್ತೀಚಿನ ವರ್ಷಗಳಲ್ಲಿ ಸಿನಿಮಾಗಳ ಆಯ್ಕೆಯಲ್ಲಿ ಅವರು ಹೆಚ್ಚು ಚ್ಯೂಸಿ ಆಗಿದ್ದಾರೆ. ಸಂಸಾರದ ಕಡೆಗೆ ಜಾಸ್ತಿ ಗಮನ ಹರಿಸಿದ್ದಾರೆ.
ಸೈಫ್ ಅಲಿ ಖಾನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರವೂ ಕರೀನಾ ಕಪೂರ್ ಅವರು ನಟನೆಯಿಂದ ದೂರ ಉಳಿದುಕೊಂಡಿಲ್ಲ. ತಮಗೆ ಇಷ್ಟ ಆಗುವ ಸಿನಿಮಾ ಮತ್ತು ಪಾತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಆ ಮೂಲಕ ಚಿತ್ರರಂಗದಲ್ಲಿ ಸಕ್ರಿಯ ಆಗಿದ್ದಾರೆ.
ಆಮಿರ್ ಖಾನ್ ಜೊತೆ ಕರೀನಾ ಕಪೂರ್ ಖಾನ್ ಅಭಿನಯಿಸಿರುವ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆಗಸ್ಟ್ 11ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.
ಹಾಲಿವುಡ್ನ ‘ಫಾರೆಸ್ಟ್ ಗಂಪ್’ ಚಿತ್ರದ ಹಿಂದಿ ರಿಮೇಕ್ ಆಗಿ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ಆಮಿರ್ ಖಾನ್ಗೆ ಜೋಡಿ ಆಗಿರುವ ಕರೀನಾ ಕಪೂರ್ ಅವರು ಗರ್ಭಿಣಿ ಗೆಟಪ್ನಲ್ಲೂ ಕಾಣಿಸಿಕೊಳ್ಳಲಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕರೀನಾ ಕಪೂರ್ ಅವರು ಆ್ಯಕ್ಟೀವ್ ಆಗಿರುತ್ತಾರೆ. ಆಗಾಗ ವಿಶೇಷವಾದ ಫೋಟೋಶೂಟ್ ಮಾಡಿಸಿ ಬಗೆಬಗೆಯ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಆ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇರುತ್ತಾರೆ. ಸದ್ಯ ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 87 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.