- Kannada News Photo gallery Lakshmi Hebbalkar's Car Crash: Randeep Singh Surjewala and Suttur Math Swamiji visited hospital
ಆಸ್ಪತ್ರೆಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಸ್
ಜನವರಿ 14 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುವಾಗ ಕಾರು ಅಪಘಾತವಾಗಿತ್ತು. ಅವರ ಬೆನ್ನುಮೂಳೆ ಮುರಿದಿದ್ದು, ಸಣ್ಣ-ಪುಟ್ಟ ಗಾಯಗಳಾಗಿವೆ. ಅವರನ್ನು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
Updated on: Jan 18, 2025 | 11:32 AM

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಮಾರ್ಗ ಮಧ್ಯೆ ಕಾರು ಅಪಘಾತವಾಗಿತ್ತು. ಜನವರಿ 14 ರಂದು ಸಂಕ್ರಾಂತಿ ಹಬ್ಬದ ದಿನದಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ರಾ.ಹೆ. 48ರಲ್ಲಿ ನಸುಕಿನ ಜಾವ 5 ಗಂಟೆ ಸುಮಾರಿಗೆ ಕಾರು ಅಪಘಾತವಾಗಿತ್ತು.

ಭೀಕರ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರವಾಗಿ ಗಾಯಗೊಂಡ ದುರ್ಘಟನೆಯ ಸುದ್ದಿ ಬಂದಿತ್ತು. ಸಚಿವೆಗೆ ಗಾಯಗಳಾದರೂ ಅದೃಷ್ಟಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದರು. ಅವರ ಬೆನ್ನುಮೂಳೆ ಮುರಿದಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಲು ಪಕ್ಷಾತೀತವಾಗಿ ಅನೇಕ ನಾಯಕರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.

ಕರ್ನಾಟಕಕ್ಕೆ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಶುಕ್ರವಾರ ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಸ್ತೆ ಅಪಘಾತದ ಕುರಿತು ಮಾಹಿತಿ ಪಡೆದು, ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಇದ್ದರು.

ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ, ರಸ್ತೆ ಅಪಘಾತದ ಮಾಹಿತಿ ಪಡೆದು ಆರೋಗ್ಯ ವಿಚಾರಿಸಿ, ಆಶೀರ್ವದಿಸಿದರು.
























