ಆಸ್ಪತ್ರೆಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಸ್

|

Updated on: Jan 18, 2025 | 11:32 AM

ಜನವರಿ 14 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುವಾಗ ಕಾರು ಅಪಘಾತವಾಗಿತ್ತು. ಅವರ ಬೆನ್ನುಮೂಳೆ ಮುರಿದಿದ್ದು, ಸಣ್ಣ-ಪುಟ್ಟ ಗಾಯಗಳಾಗಿವೆ. ಅವರನ್ನು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ ಮತ್ತು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

1 / 6
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಮಾರ್ಗ ಮಧ್ಯೆ ಕಾರು ಅಪಘಾತವಾಗಿತ್ತು. ಜನವರಿ 14 ರಂದು ಸಂಕ್ರಾಂತಿ ಹಬ್ಬದ ದಿನದಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ರಾ.ಹೆ. 48ರಲ್ಲಿ ನಸುಕಿನ ಜಾವ 5 ಗಂಟೆ ಸುಮಾರಿಗೆ ಕಾರು ಅಪಘಾತವಾಗಿತ್ತು.

2 / 6
ಭೀಕರ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರವಾಗಿ ಗಾಯಗೊಂಡ ದುರ್ಘಟನೆಯ ಸುದ್ದಿ ಬಂದಿತ್ತು. ಸಚಿವೆಗೆ ಗಾಯಗಳಾದರೂ ಅದೃಷ್ಟಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದರು. ಅವರ ಬೆನ್ನುಮೂಳೆ ಮುರಿದಿದೆ.

3 / 6
ಲಕ್ಷ್ಮೀ ಹೆಬ್ಬಾಳ್ಕರ್​ ಅವರನ್ನು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಆರೋಗ್ಯ ವಿಚಾರಿಸಲು ಪಕ್ಷಾತೀತವಾಗಿ ಅನೇಕ ನಾಯಕರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.

4 / 6
ಕರ್ನಾಟಕಕ್ಕೆ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ ಶುಕ್ರವಾರ ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

5 / 6
ರಣದೀಪ್​ ಸಿಂಗ್​ ಸುರ್ಜೇವಾಲ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಸ್ತೆ ಅಪಘಾತದ ಕುರಿತು ಮಾಹಿತಿ ಪಡೆದು, ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಇದ್ದರು.

6 / 6
ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ, ರಸ್ತೆ ಅಪಘಾತದ ಮಾಹಿತಿ ಪಡೆದು ಆರೋಗ್ಯ ವಿಚಾರಿಸಿ, ಆಶೀರ್ವದಿಸಿದರು.