
ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್ಬಾಗ್ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್ ಕುಟುಂಬ.

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ ಡಾ. ಎಂ.ಜಗದೀಶ್ ಹಾಗೂ ಲಾಲ್ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.