- Kannada News Photo gallery Laughing buddha Kannada Movie produced by Rishab Shetty releasing on August 30
ಬಿಡುಗಡೆ ಆಗುತ್ತಿದೆ ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’: ಚಿತ್ರಗಳಲ್ಲಿ ನೋಡಿ
laughing buddha: ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಕೆಲವು ಸುಂದರ ಸ್ಟಿಲ್ಗಳು ಇಲ್ಲಿವೆ.
Updated on: Aug 28, 2024 | 9:05 PM

ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಹಾಸ್ಯದ ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

ದೇಹತೂಕ ಹೆಚ್ಚಿರುವ ಪೊಲೀಸ್ ಕಾನ್ಸ್ಟೇಬಲ್ ಒಬ್ಬಾತನ ವೃತ್ತಿ ಹಾಗೂ ವೈಯಕ್ತಿಕ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನೂ ಕೆಲವು ಪ್ರತಿಭಾವಂತ ಕಲಾವಿದರಿದ್ದಾರೆ ಸಿನಿಮಾದಲ್ಲಿ.

ದಿಗಂತ್ ಮಂಚಾಲೆ ಅವರು ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ.

ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗಲಿದೆ.




