Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
Leelavathi: ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರ ಮನೆಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿರುವ ಅವರು, ಲೀಲಾವತಿ ಅವರು ಒರಿಜಿನಲ್ ಆರ್ಟಿಸ್ಟ್. ಸರ್ಕಾರದಿಂದ ಸಹಾಯ ಬೇಕಾದರೆ ಕೊಡುತ್ತೇವೆ ಎಂದು ಹೇಳಿದ್ದಾರೆ.
Updated on: Dec 03, 2023 | 5:16 PM

ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಚಿತ್ರರಂಗ ಸೇರಿದಂತೆ ರಾಜಕೀಯ ನಾಯಕರು ಸಹ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ತಾಯಿಯ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೀಲಾವತಿ ಅವರು ಚೆನ್ನಾಗಿದ್ದಾಗ ಅವರ ಜಮೀನಿಗೆ ಸಂಬಂಧ ಪಟ್ಟ ಕೆಲಸಕ್ಕೆ ಬರುತ್ತಿದ್ದರು. ಅವರನ್ನ ಆಸ್ಪತ್ರೆಗೆ ಸೇರಿಸಿದರೆ ಅದರ ಖರ್ಚು ನೋಡಿಕೊಳ್ಳುತ್ತೇವೆ. ಅವರು ಒರಿಜಿನಲ್ ಆರ್ಟಿಸ್ಟ್. ಸರ್ಕಾರದಿಂದ ಸಹಾಯ ಬೇಕಾದರೆ ಕೊಡುತ್ತೇವೆ ಎಂದು ಹೇಳಿದ್ದಾರೆ.

ಲೀಲಾವತಿ ಅವರ ಆರೋಗ್ಯ ವಿಚಾರಿಸುವ ವೇಳೆ ಪುತ್ರ ವಿನೋದ್ ರಾಜ್ ಸಿಎಂ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರ ಹಳೆಯ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ನೋಡುತ್ತಿರುವುದು.



















