
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರಿಗೆ ಇಂದು (ಡಿ.24) ಹುಟ್ಟುಹಬ್ಬದ ಸಂಭ್ರಮ.

ಹೀಗಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮ.ಹರೀಶ್ ಸೇರಿ ಸದಸ್ಯರು ಲೀಲಾವತಿ ಅವರ ಮನೆಗೆ ತೆರಳಿ ಸನ್ಮಾನಿಸಿದ್ದಾರೆ. ಜೊತೆಗೆ ಆರೋಗ್ಯ ವಿಚಾರಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದು, ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ತಮಿಳು ಭಾಷೆ ಸೇರಿದಂತೆ 600 ಚಿತ್ರಗಳಲ್ಲಿ ನಟಿಸಿದ್ದಾರೆ.

ಆದರೆ ಸದ್ಯ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದಾರೆ ಎನ್ನಲಾಗುತ್ತಿದೆ.

ನೆಲಮಂಗದಲ್ಲಿರುವ ಅವರ ತೋಟದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗ ವಿನೋದ್ ರಾಜ್ ಅವರೊಂದಿಗೆ ವಾಸವಾಗಿದ್ದಾರೆ.