ಬಾಲಿವುಡ್ ಅಂಗಳದಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಲೈಗರ್ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂಡಿಗಢ್ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಕೋಕಾ 2.0 ಹಾಡನ್ನು ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ನಟ ವಿಜಯ್ ದೇವರಕೊಂಡ, ನಾಯಕಿ ಅನನ್ಯಾ ಪಾಂಡೆ, ನಟಿ ಚಾರ್ಮಿ ಕೌರ್, ನಿರ್ದೇಶಕ ಪುರಿ ಜಗನ್ನಾಥ್ ಕಾಣಿಸಿಕೊಂಡಿದ್ದರು.