AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಮೆಸ್ಸಿ

Lionel Messi New World Record: ಅಪ್ರತಿಮ ಪ್ರತಿಭೆ, ಅದ್ಭುತ ಚಾಣಾಕ್ಷತೆ ಹಾಗೂ ಮೈದಾನದಲ್ಲಿ ಎದುರಾಳಿಗಳನ್ನು ನಿರುತ್ತರರಾಗಿಸುವ ಮಾಂತ್ರಿಕ 'ಫುಟ್‌ಬಾಲ್ ಲೋಕದ ಸಾರ್ವಭೌಮ' ಎನಿಸಿಕೊಂಡಿರುವ ಲಿಯೋನೆಲ್ ಮೆಸ್ಸಿ ಇದೀಗ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.ಈ ದಾಖಲೆಯೊಂದಿಗೆ ಮೆಸ್ಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 28, 2026 | 10:23 AM

Share
ಅರ್ಜೆಂಟೀನಾದ ಫುಟ್‌ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ವಿಶ್ವಕಪ್​ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 2026ರ ಫಿಫಾ ವಿಶ್ವಕಪ್‌ನ ಜೋರ್ಡನ್ ವಿರುದ್ಧದ ಪಂದ್ಯದಲ್ಲಿ ಗೋಲು ಗಳಿಸುವ ಮೂಲಕ ಮೆಸ್ಸಿ ವಿಶ್ವಕಪ್​ನಲ್ಲಿ ಸತತ 7 ಪಂದ್ಯಗಳಲ್ಲಿ ಗೋಲು ಹೊಡೆದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. (PC: gettyimages)

1 / 5
ಈ ಹಿಂದೆ ಫ್ರಾನ್ಸ್‌ನ ಜಸ್ಟ್ ಫಾಂಟೈನ್ ಮತ್ತು ಬ್ರೆಝಿಲ್‌ನ ಜೈರ್ಜಿನ್ಹೋ ಸತತ 6 ವಿಶ್ವಕಪ್ ಪಂದ್ಯಗಳಲ್ಲಿ ಗೋಲು ಗಳಿಸಿ ಜಂಟಿ ದಾಖಲೆ ಹೊಂದಿದ್ದರು. ಜೋರ್ಡನ್ ವಿರುದ್ಧದ ಗ್ರೂಪ್ ಹಂತದ ಅಂತಿಮ ಪಂದ್ಯದಲ್ಲಿ 80ನೇ ನಿಮಿಷದಲ್ಲಿ ಅದ್ಭುತ ಫ್ರೀ-ಕಿಕ್ ಮೂಲಕ ಗೋಲು ಗಳಿಸಿದ 39 ವರ್ಷದ ಮೆಸ್ಸಿ, ಈ ಇಬ್ಬರೂ ದಿಗ್ಗಜರನ್ನು ಹಿಂದಿಕ್ಕಿದ್ದಾರೆ. (PC: gettyimages)

2 / 5
ಲಿಯೋನೆಲ್ ಮೆಸ್ಸಿ ಅವರು 2022ರಲ್ಲಿ ಆಸ್ಟ್ರೇಲಿಯಾ, ನೆದರ್ಲ್ಯಾಂಡ್ಸ್, ಕ್ರೊಯೇಷಿಯಾ ಮತ್ತು ಫ್ರಾನ್ಸ್ ವಿರುದ್ಧದ ನಾಕೌಟ್ ಪಂದ್ಯಗಳಲ್ಲಿ ಸತತ ಗೋಲು ದಾಖಲಿಸಿದ್ದರು. ಇದೀಗ 2026ರಲ್ಲಿ ಅಲ್ಜೀರಿಯಾ, ಆಸ್ಟ್ರಿಯಾ ಮತ್ತು ಜೋರ್ಡನ್ ವಿರುದ್ಧ ಸತತವಾಗಿ ಗೋಲು ಬಾರಿಸಿದ್ದಾರೆ. ಈ ಮೂಲಕ ಫಿಫಾ ವಿಶ್ವಕಪ್​ನಲ್ಲಿ ಸತತ 7 ಪಂದ್ಯಗಳಲ್ಲಿ ಗೋಲು ದಾಖಲಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. (PC: gettyimages)

3 / 5
ಈ ಗೋಲುಗಳೊಂದಿಗೆ ಮೆಸ್ಸಿ ತಮ್ಮ ವಿಶ್ವಕಪ್ ವೃತ್ತಿಜೀವನದ ಒಟ್ಟು ಗೋಲುಗಳ ಸಂಖ್ಯೆಯನ್ನು 19ಕ್ಕೆ ಏರಿಸಿಕೊಂಡಿದ್ದಾರೆ. ಈ ಮೂಲಕ ಪುರುಷರ ಮತ್ತು ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ಗೋಲು ಗಳಿಸಿದ ಬ್ರೆಝಿಲ್‌ನ ಮಹಿಳಾ ಆಟಗಾರ್ತಿ ಮಾರ್ಟಾ ಅವರ ದಾಖಲೆಯನ್ನು ಮುರಿದು, 'ಸರ್ವಕಾಲಿಕ ಗರಿಷ್ಠ ಸ್ಕೋರರ್' ಆಗಿ ಹೊರಹೊಮ್ಮಿದ್ದಾರೆ. (PC: gettyimages)

4 / 5
ಲಿಯೋನೆಲ್ ಮೆಸ್ಸಿ ಅವರ ಭರ್ಜರಿ ಪ್ರದರ್ಶನದೊಂದಿಗೆ ಇದೀಗ ಅರ್ಜೆಂಟೀನಾ ತಂಡವು ಫಿಫಾ ವಿಶ್ವಕಪ್​ನ ರೌಂಡ್-32 ಸುತ್ತಿಗೆ ಪ್ರವೇಶಿಸಿದೆ. ಈ ನಾಕೌಟ್ ಸುತ್ತಿನಲ್ಲಿ ಅರ್ಜೆಂಟೀನಾ ತಂಡವು ಕೇಪ್​ ವರ್ಡೆ ತಂಡವನ್ನು ಎದುರಿಸಲಿದ್ದು, ಈ ಪಂದ್ಯವು ಜುಲೈ 4 ರಂದು ಮಿಯಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. (PC: gettyimages)

5 / 5

Published On - 10:23 am, Sun, 28 June 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ

ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!

ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ

ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!

ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್

ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ

ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು

ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ

ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ

ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ