AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಪರಿಸ್ಥಿತಿ ವೇಳೆ ಜೈಲುವಾಸದಿಂದ ಕೊಡಗು ಮೇಲಿನ ಪ್ರೀತಿಯವರೆಗೆ: ಕರ್ನಾಟಕಕ್ಕೂ ಅಡ್ವಾನಿಯವರಿಗೂ ಇದೆ ಅವಿನಾಭಾವ ಸಂಬಂಧ

ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು 100ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, 1925ರ ತುರ್ತು ಪರಿಸ್ಥಿತಿಯ ಜೈಲುವಾಸದಿಂದ ಹಿಡಿದು ಕೊಡಗಿನ ಪ್ರವಾಸದವರೆಗೆ ಕರ್ನಾಟಕದೊಂದಿಗಿನ ಅವರ ಸಂಬಂಧ ಅವಿನಾಭಾವವಾದುದು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಕರ್ನಾಟಕದ ಹಲವು ಪ್ರಮುಖ ರಾಜಕಾರಣಿಗಳೊಂದಿಗೆ ಅತ್ಯಂತ ಆಪ್ತ ಒಡನಾಟವನ್ನೂ ಹೊಂದಿದ್ದರು.

ಪ್ರಸನ್ನ ಹೆಗಡೆ
|

Updated on: Nov 08, 2026 | 1:12 PM

Share
ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ  ಅವರು ಇಂದು (ನವೆಂಬರ್ 8) 100ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಎಲ್​​.ಕೆ. ಅಡ್ವಾನಿ ಅವರಿಗೂ ಕರ್ನಾಟಕಕ್ಕೂ ಅತ್ಯಂತ ಅವಿನಾಭಾವ ಸಂಬಂಧವಿದೆ. ಅವರ ರಾಜಕೀಯ ಜೀವನದ ಪ್ರಮುಖ ತಿರುವುಗಳು ಮತ್ತು ವೈಯಕ್ತಿಕ ಬಾಂಧವ್ಯಗಳು ಕರ್ನಾಟಕದ ನೆಲದೊಂದಿಗೆ ಬೆಸೆದುಕೊಂಡಿವೆ.

1 / 5
1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಾಗ, ಅಡ್ವಾಣಿಯವರನ್ನು ಬೆಂಗಳೂರಿನಲ್ಲಿ ಬಂಧಿಸಿ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಸುಮಾರು 19 ತಿಂಗಳುಗಳ ಕಾಲ ಇಡಲಾಗಿತ್ತು. ಈ ಅವಧಿಯಲ್ಲಿ ಅವರು ಸಮಾಜವಾದಿ ನಾಯಕ ಜಾರ್ಜ್ ಫೆರ್ನಾಂಡಿಸ್ ಮತ್ತು ಸ್ಥಳೀಯ ನಾಯಕರೊಂದಿಗೆ ಜೈಲು ಹಂಚಿಕೊಂಡಿದ್ದರು.

2 / 5
1980 ಹಾಗೂ 90ರ ದಶಕದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಅಡ್ವಾಣಿ ಪ್ರಮುಖ ಪಾತ್ರ ವಹಿಸಿದ್ದರು. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಅಡ್ವಾಣಿಯವರ ಸೈದ್ಧಾಂತಿಕ ಮಾರ್ಗದರ್ಶನ ಮತ್ತು ಅವರು ನಡೆಸಿದ ಜನಚೇತನ ಯಾತ್ರೆಗಳು ಪ್ರಮುಖ ಪ್ರೇರಣೆಯಾಗಿದ್ದವು.

3 / 5
ಕರ್ನಾಟಕದ ಹಲವು ಪ್ರಮುಖ ರಾಜಕಾರಣಿಗಳೊಂದಿಗೆ ಅಡ್ವಾಣಿ ಅತ್ಯಂತ ಆಪ್ತ ಒಡನಾಟ ಹೊಂದಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರೊಂದಿಗೆ ಅವರಿಗೆ ಉತ್ತಮ ಸ್ನೇಹವಿತ್ತು. ಹಾಗೆಯೇ ಬಿ.ಎಸ್. ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಅವರ ರಾಜಕೀಯ ಬೆಳವಣಿಗೆಯಲ್ಲೂ ಅಡ್ವಾಣಿ ಅವರ ಮಾರ್ಗದರ್ಶನವಿತ್ತು.

4 / 5
ರಾಜಕೀಯದ ಒತ್ತಡದ ನಡುವೆ ಅಡ್ವಾಣಿಯವರು ವಿಶ್ರಾಂತಿಗಾಗಿ ಕರ್ನಾಟಕದ ಸುಂದರ ಜಿಲ್ಲೆಯಾದ ಕೊಡಗಿಗೆ ಭೇಟಿ ನೀಡುತ್ತಿದ್ದರು. ತಮ್ಮ ಕುಟುಂಬದೊಂದಿಗೆ ಕೊಡಗಿನ ರೆಸಾರ್ಟ್‌ಗಳಲ್ಲಿ ತಂಗಿ, ಅಲ್ಲಿನ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುತ್ತಿದ್ದರು ಮತ್ತು ಸ್ಥಳೀಯ ಕೊಡವ ಸಂಸ್ಕೃತಿಯ ಬಗ್ಗೆ ಅಪಾರ ಗೌರವ ಹೊಂದಿದ್ದರು.

5 / 5
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ

ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​

'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​

ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ

ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು

ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?

ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ

ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ

ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ

ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ