ಈ ಬಾರಿ ಲೋಕಾಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಗೆದ್ದ ಹಾಲಿ ಸಂಸದರು ಇವರು

ಇಂದು(ಜೂ.04) ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಕರ್ನಾಟಕದಿಂದ ಈ ಕೆಳಗಿನ ಹಾಲಿ ಸಂಸದರರು ಈ ಬಾರಿಯೂ ಗೆಲುವಿನ ನಗೆ ಬೀರಿದ್ದಾರೆ. ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ , ಬಿಎಸ್​ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ, ತೇಜಸ್ವಿ ಸೂರ್ಯ ಸೆರಿದಂತೆ ಹಲವರು ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. ಈ ಕುರಿತು ವಿವರ ಇಲ್ಲಿದೆ.

|

Updated on:Jun 04, 2024 | 4:40 PM

ಬಿಜೆಪಿಯ ಭದ್ರಕೋಟೆಯಾಗಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಮತದಾರರನ್ನು ಹೊಂದಿದೆ. ಸತತ ನಾಲ್ಕು ಅವಧಿಯಿಂದ ಬೆಂಗಳೂರು ಉತ್ತರದಲ್ಲಿ ಕಮಲ ಅರಳುತ್ತಿದ್ದು, ಅದರಂತೆ ಈ ಬಾರಿಯೂ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್​ನ ಎಂವಿ ರಾಜೀವ್​ ಗೌಡ ಅವರನ್ನು ಮಣಿಸಿ ಗೆದ್ದಿದ್ದಾರೆ. ಹೊರಗಿನಿಂದ ಬಂದ ಹಾಲಿ ಸಂಸದ ಸದಾನಂದ ಗೌಡರು ಎರಡು ಬಾರಿ ಅಂದರೆ 2014 ಮತ್ತು 2019 ರಲ್ಲಿ ಬೆಂಗಳೂರು ಉತ್ತರದಿಂದ ಗೆದ್ದಿದ್ದರು. ಆದರೆ, ಈ ಬಾರಿ ಉಡುಪಿ-ಚಿಕ್ಕಮಗಳೂರು ಹಾಲಿ ಸಂಸದೆ ಆಗಿರುವ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್​ ನೀಡಲಾಗಿತ್ತು. ಶೋಭಾ ಹೆಸರು ಘೋಷಣೆ ಆಗುತ್ತಿದ್ದಂತೆ ಗೋ ಬ್ಯಾಕ್​  ಶೋಭಕ್ಕ ಎಂಬ ಭಿತ್ತಿ ಪತ್ರಗಳು ಕ್ಷೇತ್ರದಲ್ಲಿ ಹರಿದಾಡಿತ್ತು. ಜೊತೆಗೆ ಯಾರಾದರೂ ಒಕ್ಕಲಿಗ ನಾಯಕರಿಗೆ ಅಥವಾ ಸದಾನಂದಗೌಡರಿಗೆ ಟಿಕೆಟ್​ ನೀಡುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದರು. ಈ ಮಧ್ಯೆ ಶೋಭಾ ಕರಂದ್ಲಾಜೆ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ಅದರಂತೆ ಗೆದ್ದು ಬೀಗಿದ್ದಾರೆ.

1 / 6
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದ್ದು, ಕಳೆದ 32 ವರ್ಷಗಳಿಂದ ಗೆಲುವು ಸಾಧಿಸುತ್ತಾ ಬಂದಿದೆ. ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಕ್ಷೇತ್ರ, 1991 ರಿಂದ ಭಾರತೀಯ ಜನತಾ ಪಕ್ಷವೇ ಇಲ್ಲಿ ತನ್ನ ಪ್ರಾಬಲ್ಯ ಮೆರೆದಿದೆ. ಒಮ್ಮೆ ಮಾತ್ರ ಕಾಂಗ್ರೆಸ್​ ಅಭ್ಯರ್ಥಿ ಗೆದ್ದಿದ್ದರು. ಈ ಭಾರಿಯು ಬಿಜೆಪಿ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್​ನ ಸೌಮ್ಯ ರೆಡ್ಡಿ ಅವರ ವಿರುದ್ದ ಜಯಭೇರಿ ಭಾರಿಸಿದ್ದಾರೆ. ಬಿಜೆಪಿ ಸಂಸದರಾಗಿದ್ದ ಅನಂತ್ ಕುಮಾರ್ ಬಳಿಕ 2019ರಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್​ ನೀಡಲಾಗಿತ್ತು. ನಂತರ ಗೆದ್ದು ಈ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಅದರಂತೆ 2024ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಅವರೇ ಕಣಕ್ಕೀಳಿದು ಜಯಶಾಲಿಯಾಗಿದ್ದಾರೆ.

2 / 6
ಧಾರವಾಡ ಲೋಕಸಭಾ ಕ್ಷೇತ್ರವು ಈ ಬಾರಿಯೂ ಬಿಜೆಪಿಯ ತೆಕ್ಕೆಗೆ ಬಿದ್ದಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ ಇತಿಹಾಸ ಸೃಷ್ಟಿಸಿದ್ದಾರೆ. ಕಾಂಗ್ರೆಸ್​ ಹೊಸ ಮುಖ ವಿನೋದ ಅಸೂಟಿ ಅವರ ವಿರುದ್ದ ಜೋಶಿ ಐದನೇ ಬಾರಿಗೆ ಕಣಕ್ಕಿಳಿದು ಗೆದ್ದಿದ್ದಾರೆ. ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್​ ಜೋಶಿಯವರು 6,84,837 ಮತಗಳನ್ನು ಪಡೆದುಕೊಂಡು ಕಾಂಗ್ರೆಸ್​ನ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

3 / 6
ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರು ನಟ ಶಿವರಾಜಕುಮಾರ್ ಪತ್ನಿ ಗೀತಾ ಶಿವರಾಜಕುಮಾರ್ ಅವರ ವಿರುದ್ದ ಗೆಲುವು ಭಾರಿಸಿದ್ದಾರೆ. ಕಳೆದ ನಾಲ್ಕು ಚುನಾವಣೆಗಳಿಂದ ಬಿಜೆಪಿ ಇಲ್ಲಿ ಚುಕ್ಕಾಣಿ ಹಿಡಿದುಕೊಂಡೆ ಬಂದಿದೆ. 2009ರಲ್ಲಿ ಬಂಗಾರಪ್ಪರ ಕೋಟೆಯನ್ನು ಬೇಧಿಸಿದ ಯಡಿಯೂರಪ್ಪರ ಪುತ್ರ ರಾಘವೇಂದ್ರ, ಸತತ ಮೂರನೆ ಬಾರಿ ಆಯ್ಕೆಯಾಗಿದ್ದಾರೆ. ಮಧ್ಯೆ ಕೆಲ ವರ್ಷಗಳ ಮಟ್ಟಿಗೆ ಯಡಿಯೂರಪ್ಪ ಅವರು ಶಿವಮೊಗ್ಗವನ್ನು ಪ್ರತಿನಿಧಿಸಿದ್ದರು. ಈ ಬಾರಿ ಬಿ.ವೈ ರಾಘವೇಂದ್ರಗೆ ದೊಡ್ಡ ಪೈಪೋಟಿ ಎದುರಾಗಿತ್ತು, ಒಂದೆಡೆ ಗೀತಾ ಶಿವರಾಜ್‌ಕುಮಾರ್‌ ಪೈಪೋಟಿ ನೀಡುತ್ತಿದ್ದರೆ, ಇದರ ಜತೆಗೆ ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಸ್ಪರ್ಧಿಸಿ, ತಲೆನೋವು ಹೆಚ್ಚಿಸುವಂತೆ ಮಾಡಿದ್ದರು.

4 / 6
ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಕೂಡ ಬಿಜೆಪಿಯ ಪಿಸಿ ಗದ್ದಿಗೌಡರ​ ಅವರು ಗೆಲುವಿನ ನಗೆ ಬೀರಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್, ಈ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ,​ ಸಂಯಕ್ತಾ ಪಾಟೀಲ್​ ಅವರನ್ನು ಅಖಾಡಕ್ಕಿಳಿಸಿತ್ತು. ಆದರೆ, ಅವರಿಗೆ ಗಜಕೇಸರಿ ಯೋಗ ಕೈ ಹಿಡಿಯಲಿಲ್ಲ. ಸತತ ನಾಲ್ಕು ಬಾರಿ ಗೆದ್ದಿದ್ದ ಪಿಸಿ ಗದ್ದಿಗೌಡರ್​ ಅವರೇ ಐದನೇ ಬಾರಿಗೂ ವಿಜಯಶಾಲಿಯಾಗಿ ದಾಖಲೆ ನಿರ್ಮಿಸಿದ್ದಾರೆ. ಪಿಸಿ ಗದ್ದಿಗೌಡರ ಅವರು ಕಳೆದ ಒಂದು ದಶಕದಿಂದ ಬಾಗಲೋಟೆ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

5 / 6

ಈ ಮೊದಲು ವಿಜಯಪುರವನ್ನು ಬಿಜಾಪುರ ಲೋಕಸಭಾ ಕ್ಷೇತ್ರವೆಂದು ಕರೆಯಲಾಗುತ್ತಿತ್ತು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರ. ಸಧ್ಯ ಈ ಬಾರಿಯ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿಯೂ ಬಿಜೆಪಿ ಅಭರ್ಥಿ ರಮೇಶ್‌ ಜಿಗಜಿಣಗಿ ಅವರು ಕಾಂಗ್ರೆಸ್​ನ ರಾಜು ಆಲಗೂರ ಅವರನ್ನು ಸೋಲಿಸಿ, ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಮೇಶ್‌ ಜಿಗಜಿಣಗಿ 6,35,867 ಮತಗಳನ್ನು ಪಡೆದು ಜಯ ಸಾಧಿಸಿದ್ದರು. ಈ ಬಾರಿಯೂ ಕೂಡ ಗೆಲುವಿನ ನಗೆ ಬೀರಿದ್ದಾರೆ.

6 / 6

Published On - 4:28 pm, Tue, 4 June 24

Follow us
ರಾಜ್ಯದ ವರಮಾನ ಹೆಚ್ಚಿಸಲು ವಿದೇಶಿ ಕಂಪನಿಗಳಿಂದ ಸಲಹೆ: ಬಿಜೆಪಿ ಕಿಡಿ

ಒಂದೇ ಒಂದು ಅವಕಾಶ ಕೊಡಿ ಎಂದು ಪೊಲೀಸರ ಬಳಿ ಬೇಡಿಕೆ ಇಟ್ಟ ಪ್ರಜ್ವಲ್ ರೇವಣ್ಣ!

ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ..

ಅಂತಾರಾಷ್ಟ್ರೀಯ ಯೋಗ ದಿನ; ದಟ್ಟ ಹಿಮದಲ್ಲಿ ಯೋಗಾಭ್ಯಾಸ ಮಾಡಿದ ಸೈನಿಕರು

ದರ್ಶನ್-ಪ್ರೇಮ್ ಸಿನಿಮಾ ಆರಂಭವಾಗುತ್ತ? ಅಥವಾ ನಿಲ್ಲುತ್ತಾ?

‘ದರ್ಶನ್​ ಒಳ್ಳೆ ವ್ಯಕ್ತಿ, ಜೊತೆಗಾರರಿಂದ ಏನೋ ಮೋಸ ನಡೆದಿದೆ’: ಶ್ರೀನಿವಾಸ್​

ಮೊಟ್ಟೆಯ ಮೇಲೆ 60 ಯೋಗಾಸನ ಭಂಗಿ; ಬೆರಗು ಮೂಡಿಸಿದ ಕಲಾವಿದನ ಕೈಚಳಕ

ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಹೈಕಮಾಂಡ್ ಬೇಸರ; ಪರಮೇಶ್ವರ ಹೇಳಿದ್ದಿಷ್ಟು

ಅಧಿಕಾರಿಗಳ ಸಭೆಯಲ್ಲಿ ನಿದ್ದೆಗೆ ಜಾರಿದ ನೂತನ ಎಂಎಲ್‌ಸಿ ಎ ವಸಂತಕುಮಾರ್

ದರ್ಶನ್ ಬಗ್ಗೆ ಕೇಳಿದ್ದಕ್ಕೆ ನೋ ರಿಯಾಕ್ಷನ್ ಎಂದ ನಟಿ ಶ್ರೀಲೀಲಾ