ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾದ ಕರ್ನಾಟಕದ ಹಾಲಿ ಸಂಸದರು ಇವರು

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಹುತೇಕ ಕ್ಷೇತ್ರಗಳ ಫಲಿತಾಂಶ ಬಂದಿದೆ. ಅದರಲ್ಲೂ ಕಳೆದ ಬಾರಿ ಭರ್ಜರಿ ಗೆಲುವು ಸಾಧಿಸಿದ್ದ ಘಟಾನುಘಟಿಗಳು ಈ ಬಾರಿ ಲೋಕಾ ಕಣದಲ್ಲಿ ಮುಗ್ಗರಿಸಿದ್ದಾರೆ. ಬೆಂಗಳೂರು ಗ್ರಾಮಾಂತರವನ್ನು ಭದ್ರಕೋಟೆಯನ್ನಾಗಿ ಮಾಡಿಕೊಂಡಿದ್ದ ಡಿಕೆ ಸುರೇಶ್​, ಬೀದರ್ ಲೋಕಸಭಾ ಕ್ಷೇತ್ರದ ಕೇಂದ್ರ ಸಚಿವ ಭಗವಂತ ಖೂಬಾ, ಡಾ. ಉಮೇಶ ಜಾಧವ್ ಸೇರಿದಂತೆ ಹಲವರು ಸೋಲು ಕಂಡಿದ್ದಾರೆ. ಈ ಕುರಿತು ವಿವರ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on:Jun 04, 2024 | 3:40 PM

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಭಾರೀ ಸಂಚಲನ ಮೂಡಿಸಿತ್ತು. ಹೌದು, 2013ರ ಉಪಚುನಾವಣೆಯಿಂದ ಹಿಡಿದು 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಗೆದ್ದು ಸತತವಾಗಿ, 3 ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ವಿರುದ್ಧ ಮೊದಲ ಬಾರಿಗೆ ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾಗಿದ್ದ ಡಾ. ಸಿ.ಎನ್. ಮಂಜುನಾಥ್ ಅವರನ್ನ ಕಣಕ್ಕೆ ಇಳಿಸಲಾಗಿತ್ತು. ಸಧ್ಯ ಅಚ್ಚರಿಯ ಫಲಿತಾಂಶ ಹೊರ ಬಿದ್ದಿದ್ದು, ಮೂರು ಬಾರಿಗೆ ಸ್ಪರ್ಧಿಸಿ 2,56,185 ಮತಗಳ ಅಂತರದ ಡಿಕೆ ಸುರೇಶ್​ ಅವರನ್ನೇ ಡಾ.ಮಂಜುನಾಥ್ ಸೋಲಿಸಿದ್ದಾರೆ. 

1 / 6
ಬಿಜೆಪಿ ಪಾಲಿಗೆ ಅತ್ಯಂತ ಭರವಸೆಯ ಜಿಲ್ಲೆಯಾಗಿದ್ದ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ, ಕೇಂದ್ರ ಸಚಿವ ಭಗವಂತ ಖೂಬಾ ಸೋಲುಂಡಿದ್ದಾರೆ. ಮೊದಲ ಬಾರಿಗೆ ಸ್ಪರ್ಧಿಸಿದ್ದ ಸಚಿವ ಈಶ್ವರ್​ ಖಂಡ್ರೆ ಪುತ್ರ, ಕಾಂಗ್ರೆಸ್​ ಅಭ್ಯರ್ಥಿ ಯುವ ಮುಖ ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದಾರೆ. ಹೌದು, ಪ್ರಸ್ತುತ ಕೇಂದ್ರ ಸಚಿವರಾಗಿರುವ ಭಗವಂತ ಖೂಬಾ ಅವರು 2014 ಮತ್ತು 2019ರಲ್ಲಿ ವಿಜಯ ಪತಾಕೆ ಹಾರಿಸಿದ್ದರು. ಈ ಬಾರಿಯೂ ಗೆಲ್ಲುವ ಮೂಲಕ ಇಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸು ಕಂಡಿದ್ದರು. ಆದರೆ, ಮತ್ತೆ ಸಾಗರ್ ಖಂಡ್ರೆ ಗೆಲ್ಲುವ ಮೂಲಕ ಮತ್ತೆ ಕಾಂಗ್ರೆಸ್​ ತೆಕ್ಕೆಗೆ ಹೋಗಿದೆ.

2 / 6
ಪ್ರಜ್ವಲ್ ರೇವಣ್ಣ

Prajwal Revanna Bail Plea rejected by Bengaluru Special Court Prajwal revanna Case News In kannada

3 / 6
ತೊಗರಿ ಕಣಜ ಕಲಬುರಗಿ ಲೋಕಸಭಾ ಕ್ಷೇತ್ರ ತೀರ್ವ ಪೈಪೋಟಿಗೆ ಸಾಕ್ಷಿಯಾಗಿತ್ತು. ಈ ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ ಜಾಧವ ಸ್ಪರ್ಧಿಸಿದ್ದರು. ಅದರಂತೆ ಕಾಂಗ್ರೆಸ್​ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಅವರ ವಿರುದ್ಧ ಮೊದಲ ಬಾರಿಗೆ ಸೋಲು ಕಂಡಿದ್ದರು. ಉಮೇಶ್ ಜಾಧವ್​ ಅವರಿಗೆ 6,20,192 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಈ ಭಾರಿ ಮತದಾರರು ಕೈಬಿಟ್ಟಿದ್ದಾರೆ.

4 / 6
ಬೆಳಗಾವಿ ಜಿಲ್ಲೆ ತಾಲೂಕು ಕೇಂದ್ರವಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಭಾರಿ ಎರಡು ಪ್ರಮುಖ ಪಕ್ಷಗಳು ತೀವ್ರ ಪೈಪೋಟಿ ನಡೆಸಿದ್ದವು. ಚಿಕ್ಕೋಡಿಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಕಣದಲ್ಲಿದ್ದು, ಭರ್ಜರಿ ಗೆಲುವು ಸಾಧಿಸಿದ್ದಾರೆ. 2019ರಲ್ಲಿ ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ ಸೋಲಿಸಿ ಬಿಜೆಪಿಯ ಅಣ್ಣಾಸಾಹೇಬ್ ಜೊಲ್ಲೆ ಅವರು 7.45ಲಕ್ಷ ಬಹುಮತ ಗಳಿಸಿ ವಿಜಯಸಾಧಿಸಿದ್ದರು. ಈ ಈ ಬಾರಿಯೂ ಅಣ್ಣಾಸಾಹೇಬ್ ಜೊಲ್ಲೆ ಅವರೇ ಕಣ್ಣಕಿಳಿದು ಗೆಲ್ಲುವ ವಿಶ್ವಾಸದಲ್ಲಿದ್ದರು. ಆದರೆ ಈ ಬಾರಿ ಜನಗಳು ಕೈ ಹಿಡಿದಿದ್ದಾರೆ.

5 / 6
ರಾಯಚೂರು ಲೋಕಸಭಾ ಕ್ಷೇತ್ರವು ಯಾದಗಿರಿ ಜಿಲ್ಲೆಗಳ ಭಾಗಗಳನ್ನು ಒಳಗೊಂಡಿದೆ. ಅದರಂತೆ ರಾಯಚೂರು ಲೋಕಸಭಾ ಟಿಕೆಟ್​ ಆಕಾಂಕ್ಷಿಯಾಗಿದ್ದ ಬಿವಿ ನಾಯಕ್ ಅವರಿಗೆ ಈ ಭಾರಿ ಟಿಕೆಟ್​ ಕೈತಪ್ಪಿತ್ತು. ಅವರ ಬದಲಾಗಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್​ಗೆ ಬಿಜೆಪಿ ಟಿಕೆಟ್​ ನೀಡಲಾಗಿದ್ದು, ಇದು ಬಿಜೆಪಿಯಲ್ಲಿಯೇ ಅಸಮಾಧಾನಕ್ಕೂ ಕಾರಣವಾಗಿತ್ತು. ಇತ್ತ ಕಾಂಗ್ರೆಸ್​​, ಪಕ್ಷದಲ್ಲಿ ಸಮರ್ಥ ಅಭ್ಯರ್ಥಿ ಸಿಗದ ಕಾರಣ​ ನಿವೃತ್ತ ಐಎಎಸ್​ ಅಧಿಕಾರಿ ಜಿ ಕುಮಾರ್ ನಾಯ್ಕ್ ಅವರನ್ನು ಚುನಾವಣಾ ಕಣಕ್ಕೆ ಇಳಿಸಿತ್ತು. ಅದೃಷ್ಟವಶಾತ್​ ರಾಜಾ ಅಮರೇಶ್ವರ ನಾಯಕ್​ ಅವರನ್ನು ಸೋಲಿಸಿ ಜಿ ಕುಮಾರ್ ನಾಯ್ಕ್ ಗೆದ್ದು ಬೀಗಿದ್ದಾರೆ. ಇನ್ನು ಬಿಜೆಪಿಯ ರಾಜಾ ಅಮರೇಶ್ ನಾಯಕ್ 2019 ರಲ್ಲಿ ಬಿವಿ ನಾಯಕ್ ಅವರನ್ನು ಸೋಲಿಸಿ 50% ಕ್ಕಿಂತ ಹೆಚ್ಚು ಮತಗಳನ್ನು ಪಡೆದುಕೊಳ್ಳುವ ಮೂಲಕ ಜಯಶಾಲಿಯಾಗಿದ್ದರು. 

6 / 6

Published On - 3:23 pm, Tue, 4 June 24

Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ