
ಕಳೆದ ಜುಲೈ ತಿಂಗಳಲ್ಲಿ ಭಾರತದಲ್ಲಿ ಅನೇಕ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಇದರಲ್ಲಿ ಬಹುತೇಕ ಫೋನ್ ಗಳು ಮಧ್ಯಮ ಬೆಲೆಗೆ ಬಿಡುಗಡೆ ಆಗಿವೆ. ರಿಲೀಸ್ ಆದ ಎಲ್ಲ ಮೊಬೈಲ್ ಗಳು ಅದ್ಭುತವಾಗಿದ್ದು, ಆಕರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ನಿಂದ ಆವೃತ್ತವಾಗಿದೆ. ಹಾಗಾದರೆ ಕಳೆದ ತಿಂಗಳು ರಿಲೀಸ್ ಆದ ಫೋನ್ ಗಳಲ್ಲಿ ಯಾವುದು ಉತ್ತಮವಾಗಿದೆ?, ಯಾವುದನ್ನು ಖರೀದಿಸಬಹುದು ಎಂಬುದನ್ನು ನೋಡೋಣ.

ನಥಿಂಗ್ ಫೋನ್-1: ಇದು 6.55 ಇಂಚಿನ ಫುಲ್ ಹೆಚ್ ಡಿ ಪ್ಲಸ್ ಡಿಸ್ ಪ್ಲೇ ಹೊಂದಿದೆ. ಸ್ನಾಪ್ ಡ್ರಾಗನ್ 778G+ SoC ಪ್ರೊಸೆಸರ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್ ಸಂಗ್ JN1 ಸೆನ್ಸಾರ್ ಹೊಂದಿದೆ. 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ನಥಿಂಗ್ ಫೋನ್-1 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್ ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ 32,999 ರೂ. ಆಗಿದೆ.

ಒಪ್ಪೋ ರೆನೋ 8: ಈ ಸ್ಮಾರ್ಟ್ ಫೋನ್ 6.43 ಇಂಚಿನ ಫುಲ್ ಹೆಚ್ ಡಿ ಪ್ಲಸ್ ಡಿಸ್ ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ. ಮುಖ್ಯ ಕ್ಯಾಮೆರಾ 50MP, ಎರಡನೇ ಕ್ಯಾಮೆರಾ 2MPಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 8MP ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32MPಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಒಪ್ಪೋ ರೆನೋ 8 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ 29,999ರೂ. ಆಗಿದೆ.

ರೆಡ್ಮಿ K50i ಸ್ಮಾರ್ಟ್ ಫೋನ್ 6.6 ಇಂಚಿನ ಐಪಿಎಸ್ ಎಲ್ ಸಿಡಿ ಮಾದರಿಯ ಪೂರ್ಣ ಹೆಚ್ ಡಿ ಪ್ಲಸ್ ಡಿಸ್ ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 64MP ಸೆನ್ಸಾರ್, ದ್ವಿತೀಯ ಕ್ಯಾಮೆರಾ 8MPಹೊಂದಿದೆ. 16 MP ಸೆನ್ಸಾರ್ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾ ಕೂಡ ನೀಡಲಾಗಿದೆ.

ಈ ಸ್ಮಾರ್ಟ್ ಫೋನ್ 5,080mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆದಿದೆ. ಇದರ ಬೆಲೆ 25,999 ರೂ.

ಗೂಗಲ್ ಪಿಕ್ಸೆಲ್ 6a 6.1 ಇಂಚಿನ ಫುಲ್ HD+ OLED ಡಿಸ್ ಪ್ಲೇ ಹೊಂದಿದೆ. ಆಕ್ಟಾ–ಕೋರ್ ಗೂಗಲ್ ಟೆನ್ಸರ್ GS101 SoC ಪ್ರೊಸೆಸರ್ ನೀಡಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 MPಮತ್ತು ಎರಡನೇ ಕ್ಯಾಮೆರಾ 12.2 MP ಅಲ್ಟ್ರಾ–ವೈಡ್–ಆಂಗಲ್ ಲೆನ್ಸ್ ಅನ್ನು ಹೊಂದಿದೆ. 8 MPಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್ ಫೋನ್ 4,306mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್ ಹೊಂದಿದೆ. ಇದರ ಬೆಲೆ 43,999 ರೂ.

ಐಫೋನ್ SE 2022 4.7 ಇಂಚಿನ ರೆಟಿನಾ HD ಪ್ರದರ್ಶಕವನ್ನು ಒಳಗೊಂಡಿದೆ. ಎ15 ಬಯೋನಿಕ್ ಚಿಪ್ ಬಳಸಿದೆ. f/1.8 ಲೆನ್ಸ್‌ನೊಂದಿಗೆ ಹಿಂಭಾಗದಲ್ಲಿ ಒಂದೇ 12-ಮೆಗಾಪಿಕ್ಸೆಲ್ ಕ್ಯಾಮೆರಾದೊಂದಿಗೆ ಬರುತ್ತದೆ. ಇದು 60fps ವರೆಗೆ 4K ವೀಡಿಯೊ ರೆಕಾರ್ಡಿಂಗ್ ಮತ್ತು ಸ್ಟಿಲ್ ಶಾಟ್‌ಗಳಿಗಾಗಿ ಸ್ಮಾರ್ಟ್ HDR 4 ಅನ್ನು ಸಹ ಬೆಂಬಲಿಸುತ್ತದೆ. ಇದರ ಬೆಲೆ 43,900 ರೂ. ಆಗಿದೆ.