AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರಿನಲ್ಲಿ ಹಿಂದೂ ಸಂಘಟನೆಗಳ ಅಬ್ಬರ: 28 ಗಣೇಶ ವಿಸರ್ಜನಾ ಮೆರವಣಿಗೆ, ಕೇಸರಿ ರಣಕಹಳೆ

ಮಂಡ್ಯ, ಸೆಪ್ಟೆಂಬರ್ 10: ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯದ ಮದ್ದೂರಿನಲ್ಲಿವತ್ತು ಕೇಸರಿ ಪಡೆ ಗರ್ಜಿಸಿದೆ. ಮೊನ್ನೆ ಒಂದು ಗಣೇಶ ಮೆರವಣಿಗೆಯನ್ನು ಅಡ್ಡಿಪಡಿಸಿದ್ದಕ್ಕೆ, ಕಲ್ಲು ತೂರಾಟ ಮಾಡಿದ್ದಕ್ಕೆ ಇಂದು ಬರೋಬ್ಬರಿ 28 ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆದಿದೆ. ಮದ್ದೂರಿಗೆ ಮದ್ದೂರೇ ಕೇಸರಿಮಯ ಆಗಿದ್ದು, ಹಿಂದೂ ಕಾರ್ಯಕರ್ತರು, ಶಾಲು ಬೀಸಿ, ಕುಣಿದು ಕುಪ್ಪಳಿಸಿದ್ದಾರೆ.

ದಿಲೀಪ್​, ಚೌಡಹಳ್ಳಿ
| Updated By: Ganapathi Sharma|

Updated on: Sep 10, 2025 | 2:10 PM

Share
ಭಾನುವಾರ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಬಳಿಕ ಮದ್ದೂರು ಬೂದಿ ಮುಚ್ಚಿದ ಕೆಂಡದಂತೆ ಇದೆ. ಮಂಗಳವಾರ ಮದ್ದೂರು ಪಟ್ಟ ಬಂದ್ ನಡೆಸಲಾಗಿದೆ. ಈ ಮಧ್ಯೆ ಇವತ್ತು ಬಿಜೆಪಿ ನಿಯೋಗ ಮದ್ದೂರಿಗೆ ಭೇಟಿ ನೀಡಿದ್ದು, ಮದ್ದೂರಿನಲ್ಲಿ 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ನಡೆಯುತ್ತಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ನಿಯೋಗ ಮದ್ದೂರಿನಲ್ಲಿ ಅಬ್ಬರಿಸಿದೆ.

1 / 7
ಮದ್ದೂರಿನ ಐಬಿ ಸರ್ಕಲ್​, ಪೇಟೆಬೀದಿ, ಕೊಲ್ಲಿ ಸರ್ಕಲ್​ನಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಲಾಯಿತು. ಕೇಸರಿ ಧ್ವಜವನ್ನು ಹಿಡಿದು ಹಿಂದೂ ಕಾರ್ಯಕರ್ತರು ಭರ್ಜರಿ ಡ್ಯಾನ್ಸ್ ಮಾಡಿದರು. ಜೈಶ್ರೀರಾಮ್, ಜೈಹನುಮಾನ್ ಘೋಷಣೆ ಕೂಗಿದರು.

2 / 7
ಮಂಡ್ಯದ ಮದ್ದೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗವೂ ಭೇಟಿ ಕೊಟ್ಟಿದೆ. ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿ ಆಗಿದೆ. ವಿಜಯೇಂದ್ರ, ಅಶೋಕ್, ಸಿ.ಟಿ.ರವಿ, ಸಂಸದ ಯದುವೀರ್ ಒಡೆಯರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರೇ ಮೆರವಣಿಗೆಯಲ್ಲಿ  ಭಾಗಿಯಾದರು. ಗಣೇಶನಿಗೆ ಪೂಜೆ ಸಲ್ಲಿಸಿದರು. ಮೆರವಣಿಗೆ ವೇಳೆ ಬಿಜೆಪಿ ನಾಯಕರು ಕುಣಿದು ಕುಪ್ಪಳಿಸಿದರು. ಕೇಸರಿ ಶಾಲು ಹಿಡಿದು ಮದ್ದೂರಿನಲ್ಲಿ ಅಬ್ಬರಿಸಿರುವುದು ಎಲ್ಲರ ಗಮನ ಸೆಳೆಯಿತು.

3 / 7
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಪೊಲೀಸ್ ಕಟ್ಟೆಚ್ಚರವಹಿಸಲಾಗಿತ್ತು. ಮದ್ದೂರು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ. ಭದ್ರತೆಗಾಗಿ ಬರೋಬ್ಬರಿ 1500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು.

4 / 7
ಮದ್ದೂರು ಗಲಾಟೆ ವಿಚಾರದಲ್ಲಿ ಸರ್ಕಾರದ ನಡೆಯನ್ನೇ ಖಂಡಿಸಿದ ಶಾಸಕ ಅಶ್ವತ್ಥ್​ ನಾರಾಯಣ್​, ಈ ಸರ್ಕಾರ ಬದುಕಿದ್ಯಾ? ಸತ್ತಿದ್ಯಾ ಅಂತಾ ಆಕ್ರೋಶ ಹೊರಹಾಕಿದರು. ಬಿಜೆಪಿ, ಜೆಡಿಎಸ್​ನಿಂದಲೇ ಕುಮ್ಮಕ್ಕು ಎಂದು ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು. ಇದಕ್ಕೆ ತಿರುಗೇಟು ಕೊಟ್ಟ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್​ನಿಂದ್ಲೇ ಓಲೈಕೆ ರಾಜಕೀಯ ಎಂದರು.

5 / 7
ಬಿಜೆಪಿಗೆ ಬೆಂಕಿ ಇಡೋದೇ ಕೆಲಸ ಎಂದು ಡಿಸಿಎಂ ಡಿಕೆಶಿ ಕೆಂಡಕಾರಿದರು. ಇದಕ್ಕೆ ಗರಂ ಆದ ಆರ್​.ಅಶೋಕ್​, ಇಷ್ಟು ದಿನ ನೀವ್ ಕೆಲಸ ಇಲ್ಲದೇ ರೆಸ್ಟ್​ನಲ್ಲಿ ಇದ್ದಿರಿ, ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.

6 / 7
ಒಟ್ಟಿನಲ್ಲಿ ಮಂಡ್ಯದ ಮದ್ದೂರು ಬುಧವಾರ ಸಂಪೂರ್ಣ ಕೇಸರಿಮಯ ಆಗಿತ್ತು. ಹಿಂದೂ ಸಂಘಟನೆಗಳು ಅಬ್ಬರಿಸಿದವು. 28 ಸಾಮೂಹಿಕ ಗಣೇಶ ವಿಸರ್ಜನೆ ಮೂಲಕ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನ ಮಾಡಿದರು.

7 / 7
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ