ಕರಗ ಪೂಜೆಯೊಂದಿಗೆ ಮಡಿಕೇರಿ ದಸರಾಕ್ಕೆ ಚಾಲನೆ, ಪ್ರಮುಖ ಬೀದಿಗಳಲ್ಲಿ ಕರಗ ಮೆರವಣಿಗೆ
ಮಡಿಕೇರಿ ನಗರದ ಪಂಪಿನ ಕೆರೆಯಲ್ಲಿ ಕರಗ ಉತ್ಸವದ ಮೂಲಕ ಮಡಿಕೇರಿ ದಸರಾಕ್ಕೆ ಉಸ್ತುವಾರಿ ಸಚಿವ ಬೋಸರಾಜು ಚಾಲನೆ ನೀಡಿದ್ದಾರೆ. ಮಡಿಕೇರಿಯ ಕೋಟೆ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕಂಚಿ ಕಾಮಾಕ್ಷಮ್ಮ, ಚೌಟಿ ಮಾರಿಯಮ್ಮ ದೇವರ ಕರಗಗಳು ಮಡಿಕೇರಿ ನಗರದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿವೆ. ವಿಜಯದಶಮಿಯವರೆಗೆ ಕರಗಗಳ ನಗರ ಪ್ರದಕ್ಷಿಣೆ ನಡೆಯಲಿದೆ.