AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದೆಲ್ಲೆಡೆ ಮಹಾ ಶಿವರಾತ್ರಿಯ ಸಂಭ್ರಮ; ಇಲ್ಲಿವೆ ಶಿವರಾತ್ರಿಯ ವೈಭವದ ಅಪರೂಪದ ಕ್ಷಣಗಳು

ಮಹಾಶಿವರಾತ್ರಿ ಹಬ್ಬವನ್ನು ಕರ್ನಾಟಕದಾದ್ಯಂತ ಅಪಾರ ಭಕ್ತಿ, ಸಂಭ್ರಮದಿಂದ ಆಚರಿಸಲಾಯಿತು. ಮಲೆ ಮಹದೇಶ್ವರ, ಮುರುಡೇಶ್ವರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಲಕ್ಷಾಂತರ ಭಕ್ತರು ಶಿವನಾಮ ಸ್ಮರಣೆಯಲ್ಲಿ ತೊಡಗಿದರು. ವಿಶೇಷ ಪೂಜೆ, ಜಾಗರಣೆಗಳು ನೆರವೇರಿದವು. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳು ಸೇರಿದಂತೆ ಹಲವು ಗಣ್ಯರು ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದರು. ಶಿವರಾತ್ರಿ ಆಚರಣೆಯ ಫೋಟೋಗಳು ಇಲ್ಲಿವೆ ನೋಡಿ

ಭಾವನಾ ಹೆಗಡೆ
|

Updated on: Feb 16, 2026 | 10:26 AM

Share
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಅಂಗವಾಗಿ ಲಕ್ಷಾಂತರ ಭಕ್ತರು ಸೇರಿ ಜಾಗರಣೆ ನೆರವೇರಿಸಿದರು. ರಾತ್ರಿ ಮಲೆಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ಸಲ್ಲಿಸಲಾಯಿತು. ಭಜನೆ, ಓಂ ನಮ ಶಿವಾಯ ಮಂತ್ರಪಠಣದೊಂದಿಗೆ ಶಿವನಾಮಸ್ಮರಣೆಯಲ್ಲಿ  ಭಕ್ತಿಭಾವದ ವಾತಾವರಣದಲ್ಲಿ ಭಕ್ತರು ಮಿಂದೆದ್ದರು.

1 / 7
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಜಾಗರಣೋತ್ಸವ ಭಕ್ತಿ ಸಂಭ್ರಮದಿಂದ ಜರುಗಿತು. ಈಶ್ವರನಿಗೆ ಬಿಲ್ಪತ್ರೆ ಸೇವೆ, ಕ್ಷೀರಾಭಿಷೇಕ ಸೇರಿದಂತೆ ವಿವಿಧ ವಿಶೇಷ ಪೂಜೆಗಳು ನಡೆದವು.  ರಾತ್ರಿಯಿಡೀ ಶಿವನಾಮ ಸ್ಮರಣೆ ಮಾಡಿ ಭಕ್ತರು ಖುಷಿ ಪಟ್ಟರು.

2 / 7
ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದಲ್ಲಿರುವ ಇಶಾ ಫೌಂಡೇಶನ್​ನಲ್ಲಿ ಶಿವರಾತ್ರಿ ಪ್ರಯುಕ್ತ ಭಕ್ತರ ಮಹಾಸಾಗರವೇ ಹರಿದುಬಂದಿತ್ತು. ಕಿಲೋಮೀಟರ್‌ಗಳಷ್ಟು ಉದ್ದದ ಭಕ್ತರ ಸರದಿ ಸಾಲು ಕಂಡುಬಂತು. ಬಸ್ ಸೌಲಭ್ಯ ಕೊರತೆಯಿಂದ ಭಕ್ತರು ಪರದಾಡಿದ್ದು, ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಯಿತು.

3 / 7
ಮಹಾಶಿವರಾತ್ರಿ ನಿಮಿತ್ತ ಸಿದ್ದರಾಮಯ್ಯ ಚಾಮರಾಜಪೇಟೆಯ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ಕೆ.ವೆಂಕಟೇಶ್ ಉಪಸ್ಥಿತರಿದ್ದರು. ಭಕ್ತರೊಂದಿಗೆ ದೇವರ ದರ್ಶನ ಪಡೆದು ರಾಜ್ಯದ ಸುಖಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

4 / 7
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕನಕಪುರ ತಾಲೂಕಿನ ಮಡಿವಾಳ ಗ್ರಾಮದ ಶಿವನಾಂಕೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಭೇಟಿ ವೇಳೆ ಅಭಿಮಾನಿಗಳು “ಮುಂದಿನ ಸಿಎಂ” ಎಂಬ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಶಿವರಾತ್ರಿ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

5 / 7
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಸನ ಜಿಲ್ಲೆಯ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಕುಲದೇವರಿಗೆ ಮಹಾಶಿವರಾತ್ರಿ ಪೂಜೆ ಸಲ್ಲಿಸಿದರು. ಈ ವೇಳೆ ಎಚ್.ಡಿ.ರೇವಣ್ಣ ಉಪಸ್ಥಿತರಿದ್ದು ಕುಟುಂಬ ಸಮೇತ ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ನಗರದ ತಿರುಮಲಗಿರಿ ವೆಂಕಟೇಶ್ವರ ದೇವಾಲಯದಲ್ಲಿ ದೇವೇಗೌಡರೊಂದಿಗೆ ಶಿವರಾತ್ರಿ ಪೂಜೆ ಸಲ್ಲಿಸಿದರು. ಭಕ್ತರೊಂದಿಗೆ ದರ್ಶನ ಪಡೆದು ರಾಜ್ಯದ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಿದರು.

6 / 7
ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರ್.ಟಿ ನಗರ ಶ್ರೀಕಂಠೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಇನ್ನು ಕೇಂದ್ರ ಸಚಿವ ವಿ.ಸೋಮಣ್ಣ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಶಿವಧ್ಯಾನದಲ್ಲಿ ಪಾಲ್ಗೊಂಡರು.

7 / 7
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ