AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಮಹಾಮಳೆಗೆ ಬೆಳಗಾವಿ ತತ್ತರ: ಕೃಷ್ಣೆಗೆ ಹರಿದು ಬಂತು ಭಾರಿ ನೀರು, 10ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆ

ಬೆಳಗಾವಿ, ಆಗಸ್ಟ್ 20: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಮಹಾರಾಷ್ಟ್ರದ ಕೊಯ್ನಾ ಡ್ಯಾನಿಂದ 53 ಸಾವಿರ ಕ್ಯೂಸೆಕ್, ರಾಧಾನಗರಿ ಡ್ಯಾಂನಿಂದ 11 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡಲಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 10 ಕ್ಕೂ ಹೆಚ್ಚು ಸೇತುವೆಗಳು 5ನೇ ಬಾರಿ ಮುಳುಗಡೆಯಾಗಿವೆ.

Ganapathi Sharma
|

Updated on:Aug 20, 2025 | 10:19 AM

Share
51ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯದಿಂದ 47,800 ಕ್ಯೂಸೆಕ್ ನಷ್ಟು ನೀರು ಹೊರಬಿಡಲಾಗುತ್ತಿದೆ. ಗೋಕಾಕ್, ಮೂಡಲಗಿ ತಾಲೂಕಿನ ಕೆಲ ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

1 / 8
ಇತ್ತ ಬೆಳಗಾವಿಯ ನವಿಲುತೀರ್ಥ ಡ್ಯಾಂ ಭರ್ತಿಯಾಗಿದ್ದು, ಮಲಪ್ರಭ ನದಿಗೆ 13 ಸಾವಿರ ಕ್ಯೂಸೆಕ್​ನಷ್ಟು ನೀರು ಬಿಡಲಾಗಿದೆ. ಮುನವಳ್ಳಿ ಸಂಪರ್ಕ ಸೇತುವೆ ಮುಳುಗಡೆಯಾಗಿದ್ದು, ಜನ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Naviluteertha Dam

2 / 8
ಬೆಳಗಾವಿಯಲ್ಲೂ ಮಳೆಗೆ ಭತ್ತದ ಬೆಳೆ ಕೊಚ್ಚಿ ಹೋಗಿದೆ. ಯಳ್ಳೂರ, ಶಹಾಪುರ, ವಡಗಾವಿಯಲ್ಲಿ ನಾಲೆ ನೀರು ನುಗ್ಗಿ ಎಕರೆಗಟ್ಟಲೆ ಜಮೀನು ಜಲಾವೃತಗೊಂಡಿದೆ. ನಾಟಿ ಮಾಡಿರುವ ಭತ್ತ ಕಳೆದುಕೊಳ್ಳುವ ಆತಂಕ ಎದುರಾಗಿದೆ.

3 / 8
ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಕೃಷ್ಣೆಯ ಒಡಲು ಸೇರಿದೆ. ಮತ್ತೊಂದೆಡೆ ರಾಯಚೂರು ನಗರದಲ್ಲಿ ರಸ್ತೆಗಳಲ್ಲಿ ನೀರು ನಿಂತು ಜನ ಪರದಾಡಿದರು.

4 / 8
ಕೊಪ್ಪಳದ ತುಂಗಭದ್ರಾ ಜಲಾಶಯದ 26 ಕ್ರೆಸ್ಟ್‌ ಗೇಟ್​ಗಳ ಮೂಲಕ 1.20 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಇದರಿಂದ ಆನೆಗೊಂದಿ ನವವೃಂದಾವನ ಸಂಪರ್ಕ ಕಡಿತಗೊಂಡು, ಶ್ರೀಕೃಷ್ಣ ದೇವರಾಯ ಸಮಾಧಿ ಸಾಲು ಮಂಟಪ ಮುಳುಗಡೆ ಹಂತಕ್ಕೆ ತಲುಪಿದೆ. ಇನ್ನು ಡ್ಯಾಂನ ಆರು ಗೇಟ್​ಗಳು ಜಾಮ್​ ಆಗಿದ್ದು, ಮತ್ತೆ ತಲೆ ಬಿಸಿ ಹೆಚ್ಚಾಗಿದೆ. ಕಳೆದ ವರ್ಷ 19 ನೇ ಗೇಟ್ ಕೊಚ್ಚಿ ಹೋಗಿ ಆತಂಕ ಹುಟ್ಟಿಸಿತ್ತು. ಈ ಬಾರಿ 6 ಗೇಟ್​ಗಳು ಭೀತಿ ಹುಟ್ಟಿಸಿವೆ.

5 / 8
ಯಾದಗಿರಿಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂನಿಂದ ಕೃಷ್ಣಾ ನದಿಗೆ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.. ರಾಯಚೂರಿನ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ-ಹಂಚಿನಾಳ ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದ್ದು, ನದಿ ತೀರದ ಜನರು ಎಚ್ಚರದಿಂದ ಇರಲು ಜಿಲ್ಲಾಡಳಿತ ಸೂಚನೆ ಕೊಟ್ಟಿದೆ. ಯಾದಗಿರಿಯಲ್ಲಿ ಮಳೆ ಹೊಡೆತಕ್ಕೆ ನೂರಾರು ಎಕರೆ ಬೆಳೆ ನಾಶವಾಗಿದೆ.

6 / 8
ಹುಬ್ಬಳ್ಳಿ-ಧಾರವಾಡ ಜಿಲ್ಲೆಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದ‌ಂತಾಗಿದೆ. ಕಟಾವಿಗೆ ಬಂದಿದ್ದ ಹೆಸರು, ಉದ್ದಿನ ಬೇಳೆ ಜಲಾವೃತಗೊಂಡಿದೆ. ಹುಬ್ಬಳ್ಳಿ, ಕುಂದಗೋಳ ತಾಲೂಕಿನಲ್ಲಿ ಈರುಳ್ಳಿ ಬುಡಮೇಲಾಗಿದೆ. ಬೀದರ್ ಜಿಲ್ಲೆಯಲ್ಲೂ ಕಟಾವಿಗೆ ಬಂದಿದ್ದ ಹೆಸರು ‌ಬೆಳೆ ಜಲಾವೃತಗೊಂಡಿದೆ. ಔರಾದ್ ತಾಲೂಕಿನ ಬಾಚಪಳ್ಳಿ‌ಯ ನೂರಾರು ‌ಎಕರೆ ಹೆಸರು ಬೆಳೆ ಹೊಲದಲ್ಲೇ ಮೊಳಕೆ ಯೊಡೀತಿದೆ.

7 / 8
ಮಳೆ ಕಾರಣ ಇಂದು ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜತೆಗೆ ಯಾದಗಿರಿ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿಗಳಿಗೆ, ಧಾರವಾಡದ ಶಾಲಾ-ಕಾಲೇಜುಗಳಿಗೆ, ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇವತ್ತು ರಜೆ ಘೋಷಿಸಲಾಗಿದೆ.

8 / 8

Published On - 7:21 am, Wed, 20 August 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ