Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahashivratri: ಮಹಾಶಿವರಾತ್ರಿ ಹಿನ್ನೆಲೆ ನಾಡಿನ ವಿವಿಧ ಶಿವಾಲಯಗಳ ದರ್ಶನ: ಫೋಟೋ ಇಲ್ಲಿವೆ

Mahashivratri 2023: ಇಂದು ಫೆ.18 ಮಹಾ ಶಿವರಾತ್ರಿ, ನಾಡಿನಾದ್ಯಂತ ಶಿವನ ದೇವಸ್ಥಾನಗಳಲ್ಲಿ ನಸುಕಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿವೆ. ಭಕ್ತರು ಸಹಸ್ರೋಪಾದಿಯಲ್ಲಿ ಬಂದು ಶಿವನ ದರ್ಶನ ಪಡೆಯುತ್ತಿದ್ದಾರೆ.

ವಿವೇಕ ಬಿರಾದಾರ
|

Updated on:Feb 18, 2023 | 8:38 AM

 Mahashivratri 2023: Karnataka various shiva temple images

Mahashivratri 2023: ಇಂದು ಫೆ.18 ಮಹಾ ಶಿವರಾತ್ರಿ, ನಾಡಿನಾದ್ಯಂತ ಶಿವನ ದೇವಸ್ಥಾನಗಳಲ್ಲಿ ನಸುಕಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿವೆ. ಭಕ್ತರು ಸಹಸ್ರೋಪಾದಿಯಲ್ಲಿ ಬಂದು ಶಿವನ ದರ್ಶನ ಪಡೆಯುತ್ತಿದ್ದಾರೆ.

1 / 9
 Mahashivratri 2023: Karnataka various shiva temple images

ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ನಿರ್ಮಾಣ ಮಾಡಿರುವ 112 ಅಡಿಗಳ ಆದಿಯೋಗಿ ಪ್ರತಿಮೆಯ ಮುಂದೆ, ಶಿವರಾತ್ರಿ ಸಂಭ್ರಮಾಚರಣೆ ನಡೆಯಲಿದೆ. ಶಿವರಾತ್ರಿ ಪ್ರಯುಕ್ತ ಆದಿಯೋಗಿಗೆ ಮಣ್ಣಿನ ದೀಪದ ಆರತಿ, ಯೋಗೇಶ್ವರ ಲಿಂಗಕ್ಕೆ ಅಭಿಷೇಕ ಸೇರಿದಂತೆ ನಾಗಪೂಜೆಯಲ್ಲಿ ಭಕ್ತರು ಬಾಗಿಯಾಗಿದ್ದು ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.

2 / 9
 Mahashivratri 2023: Karnataka various shiva temple images

ಮಹಾಶಿವಾತ್ರಿ ಹಿನ್ನೆಲೆ ಕೋಲಾರ ಜಿಲ್ಲೆಯ ಪ್ರಸಿದ್ದ ಕೋಟಿಲಿಂಗೇಶ್ವರ ಕ್ಷೇತ್ರದಲ್ಲಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ, ಕೋಲಾರ ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಇಲ್ಲಿಗೆ ಬರುತ್ತದೆ. ಜೊತೆಗೆ ಆಂದ್ರ ಪ್ರದೇಶ, ತಮಿಳುನಾಡು ಸೇರಿದಂತೆ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಕೋಟಿಲಿಂಗೇಶ್ವರದಲ್ಲಿ ರಥೋತ್ಸವ ಕೂಡ ನಡೆಯುತ್ತದೆ. ಸಂಜೆಗೆ ಜಾಗರಣೆ ಇರುವ ಭಕ್ತರಿಗೆ ಹರಿಕತೆ ಏರ್ಪಡಿಸಲಾಗಿದೆ.

3 / 9
 Mahashivratri 2023: Karnataka various shiva temple images

ಕೋಲಾರ ಜಿಲ್ಲೆಯ ವಕ್ಕಲೇರಿ ಮಾರ್ಕಂಡೇಶ್ವರ ಸ್ವಾಮಿಯ ದೇವಾಲಯ ಹಾಗೂ ಮಾರ್ಕಂಡೇಶ್ವರ ಸ್ವಾಮಿಯ ಬೆಟ್ಟಕ್ಕೆ‌ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಲ್ಲಿಯ ಮಾರ್ಕಂಡೇಶ್ವರ ಸ್ವಾಮಿಯ ದರ್ಶನ‌‌ ಪಡೆದು, ಮಾರ್ಕಂಡೇಶ್ವರ ಸ್ವಾಮಿಯ ರಥೋತ್ಸವ ಭಾಗವಹಿಸಿ ತಮ್ಮ ಹರಕೆಗಳನ್ನು, ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ‌ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ.

4 / 9
 Mahashivratri 2023: Karnataka various shiva temple images

ಕೋಲಾರ ತಾಲ್ಲೂಕು ಕೋರಗೊಂಡನಹಳ್ಳಿ ಗ್ರಾಮದ ಕಾಶಿವಿಶ್ವೇಶ್ವರಸ್ವಾಮಿ ದೇವಾಲಯದಲ್ಲಿ ಚಮತ್ಕಾರ ನಡೆಯುತ್ತದೆ. ಬೆಳಿಗ್ಗೆ ಕಾಶಿವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ರುದ್ರಾಭಿಷೇಕ ಮಾಡುವ ಸಂಧರ್ಭದಲ್ಲಿ ಸೂರ್ಯನರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುತ್ತದೆ. ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ ಈ ದೇವಾಲಯವನ್ನು ಇತ್ತೀಚಿಗೆ ಜೀರ್ಣೋದ್ಧಾರ ಮಾಡಲಾಗಿದ್ದು, ಕಾಶಿ ವಿಶ್ವೇಶ್ವರ ಸ್ವಾಮಿಯ ದರ್ಶನಕ್ಕೆ ನೂರಾರು ಸಂಖ್ಯೆಯ ಭಕ್ತರು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ. ಮಹಾಶಿವರಾತ್ರಿಯ ಜಾಗರಣೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಗಳನ್ನು ದೇವಾಲಯದ ಆಡಳಿತ ಮಂಡಳಿ ಆಯೋಜನೆ ಮಾಡಿದೆ.

5 / 9
 Mahashivratri 2023: Karnataka various shiva temple images

ಯಾದಗಿರಿ ನಗರದ ಆತ್ಮಲಿಂಗ ದೇವಸ್ಥಾನದಲ್ಲಿ ಶಿವರಾತ್ರಿಗಾಗಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ಬೆಳಗ್ಗೆನೇ ಭಕ್ತರ ದಂಡು ದೇವಸ್ಥಾನಕ್ಕೆ ಹರಿದು ಬರುತ್ತಿದೆ. ಇನ್ನು ಸಂಜೆಯ ವೇಳೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಬಂದು ಈಶ್ವರನ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆ ದೇವಸ್ಥಾನದಲ್ಲಿ ಸಾಕಷ್ಟು ಸಿದ್ದತೆ ಮಾಡಿಕೊಳ್ಳಲಾಗಿದೆ. ದೇವಸ್ಥಾನದ ಸುತ್ತಲೂ ಕಲರ್ ಫುಲ್ ಲೈಟಿಂಗ್​ಗಳನ್ನ ಅಳವಡಿಸಲಾಗಿದೆ. ಸಂಜೆ ದೇವಸ್ಥಾನದ ಆವರಣದಲ್ಲಿ ಶಿವನ ಬಗ್ಗೆ ಈಶ್ವರಿ ಬ್ರಹ್ಮಕುಮಾರಿ ಸಂಸ್ಥೆಯಿಂದ ಪ್ರವಚನ ನಡೆಯಲಿದೆ.

6 / 9
 Mahashivratri 2023: Karnataka various shiva temple images

ರಾಯಚೂರು ಜಿಲ್ಲೆಯಲ್ಲಿ ಮಹಾಶಿವರಾತ್ರಿ ಮತ್ತು ಅಮವಾಸ್ಯೆಯನ್ನು ಜನ ಬಹಳ ಅದ್ಧೂರಿಯಾಗಿ, ಭಕ್ತಿ ಪೂರಕವಾಗಿ ಆಚರಿಸುತ್ತಾರೆ. ಶಿವನ ವಿವಿಧ ರೂಪಗಳ ಮಾದರಿಯನ್ನು ಮಾಡುತ್ತಾರೆ. ರಾಯಚೂರು ನಗರದ ಹೃದಯ ಭಾಗದಲ್ಲಿರೊ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬೆಳಗಿನ ಜಾವದಿಂದ ಪೂಜಾ-ಕೈಂಕರ್ಯಗಳು, ವಿವಿಧ ವಿಧಿವಿಧಾನಗಳು ಪ್ರಾರಂಭವಾಗಿವೆ. ಶಿವನಿಗೆ ರುದ್ರಾಭಿಷೇಕಗಳನ್ನು ನೆರವೇರಿಸಲಾಗುತ್ತದೆ. ಗರ್ಭಗುಡಿಯಲ್ಲಿ ವಿಶೇಷ ಪುಷ್ಪಾಲಂಕಾರ ಮಾಡಲಾಗಿದೆ.

7 / 9
 Mahashivratri 2023: Karnataka various shiva temple images

ಕೋಟೆನಾಡು ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇಗುಲದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ನೀಲಕಂಠೇಶ್ವರ ದೇಗುಲದಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ. ಇಂದು ಸಾಮೂಹಿಕ ರುದ್ರಾಭಿಷೇಕ ಆಯೋಜನೆ ಮಾಡಲಾಗಿದ್ದು, ದೇಗುಲಕ್ಕೆ ಅಸಂಖ್ಯ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.

8 / 9
 Mahashivratri 2023: Karnataka various shiva temple images

ನಾಡಿನ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಶಿವರಾತ್ರಿ ನಿಮಿತ್ತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ನಸುಕಿನ ಜಾವದಿಂದ ಭಕ್ತರು ಶ್ರೀ ಸಿದ್ಧಾರೂಢರ ದರ್ಶನ ಪಡೆಯುತ್ತಿದ್ದಾರೆ.

9 / 9

Published On - 7:10 am, Sat, 18 February 23

Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್