ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಪುತ್ರಿ ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾಳೆ. ಆಕೆಗೆ ಇನ್ಸ್ಟಾಗ್ರಾಮ್ನಲ್ಲಿ ಲಕ್ಷಾಂತರ ಅಭಿಮಾನಿಗಳು ಇದ್ದಾರೆ.
ಮಗಳಿಗೆ ಹತ್ತು ಹಲವು ರೀತಿಯಲ್ಲಿ ಮಹೇಶ್ ಬಾಬು ಅವರು ಪ್ರೋತ್ಸಾಹ ನೀಡುತ್ತಿದ್ದಾರೆ. ವಿದ್ಯಾಭ್ಯಾಸ ಮಾಡುತ್ತಲೇ ಚಿತ್ರರಂಗದಲ್ಲೂ ಆಕೆ ಬೆಳೆಯಲಿ ಎಂದು ಮಹೇಶ್ ಬಾಬು ಬಯಸಿದಂತಿದೆ.
‘ಜೀ ತೆಲುಗು’ ವಾಹಿನಿಯ ‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ಕಾರ್ಯಕ್ರಮಕ್ಕೆ ಮಹೇಶ್ ಬಾಬು ಅವರು ಮಗಳನ್ನು ಕರೆದುಕೊಂಡು ಬರಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ.
ತೆಲುಗಿನ ಈ ಕಾರ್ಯಕ್ರಮ ಇತ್ತೀಚೆಗಷ್ಟೇ ಆರಂಭ ಆಗಿದೆ. ಅಕುಲ್ ಬಾಲಾಜಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ ಎಂಬುದು ವಿಶೇಷ. ಹಾಗಾಗಿ ಕನ್ನಡದ ಪ್ರೇಕ್ಷಕರು ಕೂಡ ಇದನ್ನು ವೀಕ್ಷಿಸುತ್ತಿದ್ದಾರೆ.
ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಜೊತೆ ಮಹೇಶ್ ಬಾಬು ಹೊಸ ಸಿನಿಮಾ ಮಾಡಬೇಕಿದೆ. ಅದರ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಆ ನಡುವೆ ಅವರು ಟಿವಿ ಶೋನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ.