ಮಹೇಶ್ ಬಾಬು ಅವರು ಬಹಳ ಸಂದರ್ಭದಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.
ಈಗ ಮಹೇಶ್ ಬಾಬು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾರಿನ ಬಳಿ ನಿಂತಿರುವ ಫೋಟೋಗಳು ಇದಾಗಿವೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಮಹೇಶ್ ಬಾಬು ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಕಾರಣಾಂತರಗಳಿಂದ ಸಿನಿಮಾ ಕೆಲಸ ವಿಳಂಬ ಆಗಿದೆ.
ಮಹೇಶ್ ಬಾಬು ಅವರು ಕಳೆದ ವರ್ಷ ಅಪ್ಪ-ಅಮ್ಮನನ್ನು ಕಳೆದುಕೊಂಡರು. ಹೀಗಾಗಿ, ಸಿನಿಮಾ ಸೆಟ್ಗೆ ಬರೋಕೆ ಅವರಿಗೆ ಸಾಧ್ಯವಾಗಿಲ್ಲ. ಈಗ ಅವರು ವೇಗವಾಗಿ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದಾರೆ.
ಮಹೇಶ್ ಬಾಬುಗೆ ದೊಡ್ಡ ಅಭಿಮಾನಿ ಬಳಗ ಇದೆ. ಇನ್ಸ್ಟಾಗ್ರಾಮ್ನಲ್ಲಿ ಒಂದು ಕೋಟಿಗೂ ಹೆಚ್ಚು ಜನರು ಅವರನ್ನು ಹಿಂಬಾಲಿಸುತ್ತಿದ್ದಾರೆ. ರಾಜಮೌಳಿ ಜೊತೆ ಮಹೇಶ್ ಬಾಬು ಸಿನಿಮಾ ಮಾಡಲಿದ್ದಾರೆ.