Hearth Attack: ಆರೋಗ್ಯಕರ ಹೃದಯಕ್ಕಾಗಿ ಈ ಟಿಪ್ಸ್​​ ಫಾಲೋ ಮಾಡಿ

| Updated By: Digi Tech Desk

Updated on: Feb 23, 2023 | 4:35 PM

ನಿಮ್ಮ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ನಿಮಗೆ ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ.

1 / 7
ಇಂದಿನ ಬದಲಾದ ಜೀವನಶೈಲಿಯಿಂದಾಗಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ವಯಸ್ಕರಿಗಿಂತ ಹೆಚ್ಚಾಗಿ ಯುವಕರಲ್ಲಿಯೇ ಕಂಡುಬರುತ್ತಿದೆ. ನಿಮ್ಮ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ನಿಮಗೆ ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ.

2 / 7
ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗೆ ಪ್ರಮುಖ ಅಪಾಯಕಾರಿ ಅಂಶಗಳಾಗಿವೆ. ನಿಮ್ಮ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಆರೋಗ್ಯಕರ ಜೀವನಶೈಲಿ ಅಗತ್ಯವಿದೆ.

3 / 7
ಹೆಚ್ಚು ಆಲ್ಕೋಹಾಲ್ ಕುಡಿಯುವುದರಿಂದ ರಕ್ತದೊತ್ತಡವನ್ನು ಹೆಚ್ಚಿಸಬಹುದು ಮತ್ತು ಇತರ ಹೃದ್ರೋಗದ ಅಪಾಯಕಾರಿ ಅಂಶಗಳಿಗೆ ಕಾರಣವಾಗಬಹುದು. ನೀವು ಆಲ್ಕೋಹಾಲ್ ಮಿತವಾಗಿ ಸೇವಿಸಿ ಮಾಡಿ.

4 / 7
ಅಧಿಕ ತೂಕ ಅಥವಾ ಬೊಜ್ಜು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಆಹಾರ ಮತ್ತು ವ್ಯಾಯಾಮದ ಸಂಯೋಜನೆಯ ಮೂಲಕ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ.

5 / 7
ಧೂಮಪಾನವು ಹೃದ್ರೋಗಕ್ಕೆ ಪ್ರಮುಖ ಅಪಾಯಕಾರಿ ಅಂಶವಾಗಿದೆ. ಧೂಮಪಾನವು ಕೇವಲ ನಿಮ್ಮ ಆರೋಗ್ಯವನ್ನು ಕೆಡಿಸುವುದು ಮಾತ್ರವಲ್ಲದೇ ಧೂಮಪಾನದ ಹೊಗೆಯು ನಿಮ್ಮ ಮಕ್ಕಳ ಮತ್ತು ಕುಟುಂಬದ ಆರೋಗ್ಯವನ್ನೂ ಕೆಡಿಸುತ್ತದೆ.

6 / 7
ನಿಯಮಿತ ವ್ಯಾಯಾಮವು ಹೃದಯದ ಆರೋಗ್ಯವನ್ನು ಸುಧಾರಿಸಲು ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪ್ರತಿ ವಾರ ಕನಿಷ್ಠ 150 ನಿಮಿಷಗಳ ಕಾಲ ವ್ಯಾಯಾಮ ಮಾಡಿ.

7 / 7
ಸ್ಯಾಚುರೇಟೆಡ್ ಮತ್ತು ಕೊಬ್ಬುಗಳು, ಉಪ್ಪು ಮತ್ತು ಸಕ್ಕರೆ ಕಡಿಮೆ ಇರುವ ಆರೋಗ್ಯಕರ ಆಹಾರವನ್ನು ಸೇವಿಸಿ. ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿ.

Published On - 4:33 pm, Thu, 23 February 23