- Kannada News Photo gallery Maldives President Mohamed Muizzu and First Lady Sajidha Mohammed arrived in Bangalore kannada news
ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್
ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ಸಚಿವ ಡಾ. ಎಂ.ಸಿ ಸುಧಾಕರ್ ಅವರು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರಿಗೂ ಸ್ವಾಗತಿಸಿದರು.
Updated on: Oct 09, 2024 | 12:38 PM

ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ಸಚಿವ ಡಾ. ಎಂ.ಸಿ ಸುಧಾಕರ್ ಅವರು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರಿಗೂ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಎನ್. ಶಿವಶಂಕರ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟಿನತ್ತ ಕಣ್ಣು ಹಾಯಿಸುತ್ತಿರುವ ಮುಯಿಜ್ಜು, ತನ್ನ ದೇಶದ ಸಂಬಂಧವನ್ನು ಮರುಹೊಂದಿಸಲು ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಲ್ಡೀವ್ಸ್‌ನ ಮಂತ್ರಿಗಳ ಆಕ್ಷೇಪಾರ್ಹ ಹೇಳಿಕೆಗಳು ದ್ವಿಪಕ್ಷೀಯ ಸಂಬಂಧವನ್ನು ಹದಗೆಡಿಸಿತ್ತು.

ನಾಲ್ಕು ದಿನಗಳ ರಾಜ್ಯ ಪ್ರವಾಸಕ್ಕಾಗಿ ಭಾನುವಾರ ದೆಹಲಿಗೆ ಹೋಗಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರು, ಭಾರತದ ಭದ್ರತೆಯನ್ನು ಹಾಳುಮಾಡುವ ಯಾವುದನ್ನೂ ತಮ್ಮ ದೇಶ ಎಂದಿಗೂ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದರು.

ಭಾನುವಾರ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಸಭೆ ನಡೆಸಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದರು. ಭಾರತ ಮತ್ತು ಮಾಲ್ಡೀವ್ಸ್ ಅಡ್ಡು ಮತ್ತು ಬೆಂಗಳೂರಿನಲ್ಲಿ ಕಾನ್ಸುಲೇಟ್‌ಗಳನ್ನು ತೆರೆಯುವ ಬಗ್ಗೆಯೂ ಚರ್ಚಿಸಲಾಗಿದೆ.



















