ಅಂತೆ-ಕಂತೆಗಳಿಗೆ ತೆರೆ: ಕರ್ನಾಟಕದಲ್ಲಿ ಜೋಡೆತ್ತು ಸರ್ಕಾರ, ದಿಲ್ಲಿಯಿಂದಲೇ ಒಗ್ಗಟ್ಟು ಪ್ರದರ್ಶನ ಸಂದೇಶ
ಅಂತೂ ಇಂತೂ ಕರ್ನಾಟಕದ ಮುಂಖ್ಯಮಂತ್ರಿ ಯಾರು ಎನ್ನುವ ರಾಜ್ಯದ ಜನತ ಕಾತರಕ್ಕೆ ತೆರೆಬಿದ್ದಿದೆ. ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರ ಯಶಸ್ವಿಯಾಗಿದೆ. ಕಳೆದ ನಾಲ್ಕೈದು ದಿನಗಳಿಂದು ದೆಹಲಿಯಲ್ಲಿ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಬ್ರೇಕ್ ಬಿದ್ದಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ತೆರೆಮರೆಯಲ್ಲಿ ಪ್ರತ್ಯೇಕವಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದರು. ಅಂದಿನಿಂದ ಒಬ್ಬರಿಗೊಬ್ಬರು ಮುಖ ನೋಡಿರಲಿಲ್ಲ. ಇದೀಗ ಅಂತಿಮವಾಗಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಎಲ್ಲಾ ಗೊಂದಲಗಳನ್ನು ಬಗೆಹರಿಸಿದ್ದು, ಸಿದ್ದು, ಡಿಕೆಶಿ ಕೈ ಹಿಡಿದು ಮೇಲೆತ್ತಿ ನಾವೆಲ್ಲರೂ ಒಂದಾಗಿದ್ದೇವೆ ಎಂದು ಸಂದೇಶ ರವಾನಿಸಿದರು.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9