- TV9 Kannada Photo gallery Mandya dalit leader arrested For derogatory post Against Minister Dr G parameshwar
ಗೃಹ ಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ, ಮುಖ್ಯಮಂತ್ರಿ, ಮಂತ್ರಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಮಾಹಿತಿ, ಟೀಕೆ, ವ್ಯಂಗ್ಯವಾಡುವವರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದೆ. ಈಗಾಗಲೇ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದ ಓರ್ವ ಸರ್ಕಾರಿ ನೌಕರನನ್ನು ಸಸ್ಪೆಂಡ್ ಮಾಡಲಾಗಿದೆ. ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧವೂ ದೂರು ದಾಖಲಾಗಿದೆ. ಇದೀಗ ಮತ್ತೋರ್ವ ಯುವಕ ಗೃಹ ಸಚಿವರ ವಿರುದ್ಧ ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾಗಿದ್ದಾನೆ.
Updated on:Jun 02, 2023 | 10:42 AM

ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ಮರಳಿಗ ಗ್ರಾಮದ ದಲಿತ ಮುಖಂಡ ಶಿವರಾಜ್ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರ ತಾಲೂಕಿನ ಮರಳಿಗ ಗ್ರಾಮದ ಯುವಕ ಶಿವರಾಜ್ ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್ ಹಾಕಿದ್ದ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿವರಾಜ್

ಈ ದೂರಿನ ಆದಾರದ ಮೇಲೆ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು ಆರೋಪಿ ಶಿವರಾಜ್ನನ್ನು ಅರೆಸ್ಟ್ ಮಾಡಿದ್ದಾರೆ.

ಈ ಕುರಿತು ಮದ್ದೂರು ಕಾಂಗ್ರೆಸ್ ಮುಖಂಡರು ದೂರು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಹೀಗಾಗಿ ಸರ್ಕಾರ ಮತ್ತು ಸಚಿವರ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡುವ ಮುನ್ನಾ ಎಚ್ಚರ ಎಚ್ಚರ
Published On - 9:55 am, Fri, 2 June 23

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
Read More



