ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ಮರಳಿಗ ಗ್ರಾಮದ ದಲಿತ ಮುಖಂಡ ಶಿವರಾಜ್ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರ ತಾಲೂಕಿನ ಮರಳಿಗ ಗ್ರಾಮದ ಯುವಕ ಶಿವರಾಜ್ ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್ ಹಾಕಿದ್ದ
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿವರಾಜ್
ಈ ದೂರಿನ ಆದಾರದ ಮೇಲೆ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು ಆರೋಪಿ ಶಿವರಾಜ್ನನ್ನು ಅರೆಸ್ಟ್ ಮಾಡಿದ್ದಾರೆ.
ಈ ಕುರಿತು ಮದ್ದೂರು ಕಾಂಗ್ರೆಸ್ ಮುಖಂಡರು ದೂರು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಹೀಗಾಗಿ ಸರ್ಕಾರ ಮತ್ತು ಸಚಿವರ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡುವ ಮುನ್ನಾ ಎಚ್ಚರ ಎಚ್ಚರ
Published On - 9:55 am, Fri, 2 June 23