- Kannada News Photo gallery mandya women's grand welcome and celebration for Gruha Lakshmi Scheme launch in mysore
Gruha Lakshmi Scheme: ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತಕೋರಿದ ಮಹಿಳೆಯರು
ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ಮಹಿಳೆಯರು ಹಿನ್ನೆಲೆ ಮನೆಯ ಮುಂದೆ ರಂಗೋಲಿ ಹಾಕಿ ಗ್ಯಾರಂಟಿ ಕಾರ್ಡ್ ಗೆ ಪೂಜೆ ಸಲ್ಲಿಸಿ ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತ ಕೋರಿದ್ದಾರೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ಸಿಗಲಿದೆ. ಹೀಗಾಗಿ ಮಂಡ್ಯದಲ್ಲಿ ಸಂಭ್ರಮ ಮನೆ ಮಾಡಿದೆ.
Updated on: Aug 29, 2023 | 3:24 PM

ನಾಳೆ(ಆ.30) ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಹಿನ್ನೆಲೆ ಮನೆಯ ಮುಂದೆ ರಂಗೋಲಿ ಹಾಕಿ ಗ್ಯಾರಂಟಿ ಕಾರ್ಡ್ ಗೆ ಪೂಜೆ ಸಲ್ಲಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಹಿಳೆಯರು ಗ್ಯಾರಂಟಿ ಕಾರ್ಡ್ ಗೆ ಪೂಜೆ ಸಲ್ಲಿಸಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ಮಹಿಳೆಯರು ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತ ಕೋರಿದ್ದಾರೆ. ವಿಶೇಷವಾಗಿ ಮನೆಯ ಮುಂದೆ ರಂಗೋಲಿ ಹಾಕಿ ಪೂಜೆ ಸಲ್ಲಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ಸಿಗಲಿದೆ. ಹೀಗಾಗಿ ಮಂಡ್ಯದಲ್ಲಿ ಸಂಭ್ರಮ ಮನೆ ಮಾಡಿದೆ. ಮೊತ್ತಹಳ್ಳಿ ಗ್ರಾಮದ ಮಹಿಳೆಯರು ಮನೆ ಮುಂದೆ ಸಗಣಿ ಸಾರಿಸಿ ರಂಗೋಲಿ ಬಿಡಿಸಿ ನಾನೇ ಮನೆ ಯಜಮಾನಿ, ಜೈ ಕಾಂಗ್ರೆಸ್, ಗೃಹಲಕ್ಷ್ಮಿ ಯೋಜನೆ ಎಂದು ಬರೆದು ಸಂಭ್ರಮಿಸುತ್ತಿದ್ದಾರೆ.

ಮೊತ್ತಹಳ್ಳಿ ಗ್ರಾಮದ ಹಿರಿಯ ಅಜ್ಜಿಯೊಬ್ಬರು ಯೋಜನೆ ತಂದಿದ್ದು ಬಹಳ ಅನುಕೂಲವಾಗಿದೆ ಎಂದು ಕೈ ಮುಗಿದು ಕಾಂಗ್ರೆಸ್ಗೆ ಅಭಿನಂದನೆ ಸಲ್ಲಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಕೌಂಟ್ ಡೌನ್ ಶುರುವಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗೃಹ ಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ಕೇಂದ್ರ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆಯವರು ಚಾಲನೆ ನೀಡಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಕಾರ್ಯಕ್ರಮ ಹಿನ್ನೆಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜಯ ಮೈದಾನದಲ್ಲಿ ಒಂದು ಲಕ್ಷ ಫಲಾನುಭವಿಗಳನ್ನ ಸೇರಿಸಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಸಿದ್ಧತೆ ನಡೆದಿದೆ. ಈ ಯೋಜನೆ ಜಾರಿಯಾಗುತ್ತಿದ್ದಂತೆ ಮನೆಯ ಯಜಮಾನಿ ಮಹಿಳೆ ಖಾತೆಗೆ ಮಾಸಿಕ ಕಂತು 2000 ರೂ. ಜಮೆ ಆಗಲಿದೆ.

ಗೃಹಲಕ್ಷ್ಮಿ ಯೋಜನೆಯ 1.28 ಕೋಟಿ ಫಲಾನುಭವಿಗಳ ಪೈಕಿ ಈಗಾಗಲೇ 1.10 ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಮುಂದಿನ ತಿಂಗಳಿಂದಲೇ ಮನೆಯ ಯಜಮಾನಿಗೆ ಹಣ ಸಂದಾಯವಾಗಲಿದೆ.



















