ಇತ್ತೀಚೆಗೆ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಪರಿಣಾಮ ಹಲವು ಸರ್ಕಾರಿ ಶಾಲೆಗಳು ಬೀಗ ಹಾಕಬೇಕಾದ ಪರಿಸ್ಥಿತಿ ಬಂದಿದೆ. ಹೀಗಾಗಿ ಕನ್ನಡ ಶಾಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕಡಲನಗರಿಯಲ್ಲಿ ವಿಶೇಷ ಕಾರ್ಯಕ್ರಮವೊಂದನ್ನು ನಡೆಸಲಾಯಿತು. ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಕನ್ನಡ ಶಾಲೆಯ ಮಕ್ಕಳು ಜ್ಞಾನ ಸಂಪಾದನೆಯ ಜೊತೆ ಕಾರ್ಯಕ್ರಮವನ್ನು ಎಂಜಾಯ್ ಮಾಡಿದ್ದಾರೆ.

ಮಂಗಳೂರಿನ ಸಂಘನಿಕೇತನದಲ್ಲಿ ಎರಡು ದಿನಗಳ ಕಾಲ ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಿತು. ಕನ್ನಡ ಶಾಲೆಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಕೇಶವ ಸ್ಮೃತಿ ಸಂವರ್ಧನ ಸಮಿತಿ ನಡೆಸಿತು. ಮೊದಲ ದಿನದ ಹಬ್ಬದಲ್ಲಿ ದಕ್ಷಿಣಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಐದರಿಂದ ಹತ್ತನೇ ತರಗತಿವರೆಗಿನ ಸುಮಾರು 8 ಸಾವಿರ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಗೋಕರ್ಣನಾಥೇಶ್ವರ ಕಾಲೇಜು ಮೈದಾನದಿಂದ ಸಂಘನಿಕೇತನ ತನಕ ಮೆರವಣಿಗೆ ನಡೆಯಿತು. ಬಳಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕಾರ್ಯಕ್ರಮವನ್ನು ಉದ್ಘಾಸಿದರು.

Mangaluru Kannada School Children's Festival Childrens enjoyed the special programme Dakshina kannada news in kannada

Published On - 11:00 am, Mon, 21 November 22