AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್ ಸಿಟಿ ಮಂಗಳೂರಿನ ರಸ್ತೆಗಳಲ್ಲಿ ಗುಂಡಿಗಳದ್ದೇ ದರ್ಬಾರ್​: ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಿಡಿಶಾಪ‌

ಮಂಗಳೂರು ಸ್ಮಾರ್ಟ್ ಸಿಟಿ ಎಂದು ಹೇಳಲಾಗುತ್ತಿದ್ದರೂ, ಮಳೆಗಾಲದಲ್ಲಿ ರಸ್ತೆಗಳಲ್ಲಿನ ಗುಂಡಿಗಳು ದೊಡ್ಡ ಸಮಸ್ಯೆಯಾಗಿದೆ. ಪ್ರಮುಖ ರಸ್ತೆಗಳು ಸೇರಿದಂತೆ ಅನೇಕ ರಸ್ತೆಗಳು ಹದಗೆಟ್ಟಿವೆ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಪಾಲಿಕೆಯ ನಿರ್ಲಕ್ಷ್ಯದಿಂದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಡಿವೈಎಫ್​ಐ ಸಂಘಟನೆ ಮಂಗಳವಾರ ಪ್ರತಿಭಟನೆಗೆ ನಿರ್ಧರಿಸಿದೆ.

ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 21, 2025 | 10:07 AM

Share
ಮಳೆಗಾಲ ಬಂತು ಅಂದರೆ ಸಾಕು ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಸಮಸ್ಯೆಗಳ ಸರಮಾಲೆಯೇ ಸೃಷ್ಟಿಯಾಗುತ್ತೆ. ಜೋರು ಮಳೆಗೆ ನಗರದ ಹಲವು ಭಾಗಗಳು ಮುಳುಗಡೆಯಾದರೆ, ಇತ್ತ ರಸ್ತೆ ತುಂಬಾ ಗುಂಡಿಗಳೇ ಗುಂಡಿಗಳು. ಹೀಗಾಗಿ ಗುಂಡಿಗಳ ಜೊತೆ ಅವ್ಯವಸ್ಥೆಯ ಆಗರವಾಗಿರುವ ಮಂಗಳೂರಿನಲ್ಲಿ ಜನ ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

1 / 6
ಹೌದು.. ಕಡಲ ತಡಿ ಮಂಗಳೂರಿನ ರಸ್ತೆಗಳು ಗುಂಡಿಗಳ ಆಗರವಾಗಿ ಬಿಟ್ಟಿದೆ. ಸ್ಮಾರ್ಟ್ ಸಿಟಿಯ ಒಳ ರಸ್ತೆ ಮಾತ್ರವಲ್ಲ, ಪ್ರಮುಖ ರಸ್ತೆಗಳು ಹೊಂಡ, ಗುಂಡಿಗಳಿಂದ ತುಂಬಿದೆ. ಪ್ರಮುಖ ರಸ್ತೆಗಳೇ ಕಚ್ಚಾ ರಸ್ತೆಗಿಂತಲೂ ಕಡೆಯಾಗಿ ಬಿಟ್ಟಿದೆ.

2 / 6
ಪಂಪುವೆಲ್​ನಿಂದ ಕಂಕನಾಡಿ ಮೂಲಕ ಮಂಗಳೂರು ನಗರಕ್ಕೆ ಪ್ರವೇಶಿಸುವ ಈ ರಸ್ತೆಯ ಗುಂಡಿಗಳು ಕಾರುಬಾರು ಜೋರಾಗಿದೆ. ಇಂತಹ ದೊಡ್ಡ ದೊಡ್ಡ ಗುಂಡಿಗಳಿಂದಾಗಿ ದ್ವಿಚಕ್ರ ವಾಹನ ಸವಾರ ಪಾಡು ಹೇಳತೀರದ್ದಾಗಿದೆ. ಸಾಕಷ್ಟು ವಾಹನ ಸವಾರರು ಈ ಗುಂಡಿಗಳಲ್ಲಿ ಬಿದ್ದಿದ್ದಾರೆ ಕೂಡ.

3 / 6
ಮಂಗಳೂರು ಕದ್ರಿ ಕಂಬಳದಿಂದ ಕದ್ರಿ ದೇವಸ್ಥಾನ ಸಂಪರ್ಕಿಸುವ ರಸ್ತೆ, ಕೋಡಿಯಾಲ್ ಬೈಲ್ ಅಡ್ಡ ರಸ್ತೆ, ಜೆಪ್ಪು ಮಹಕಾಳಿ ಪಡ್ಪು ಶಾಲೆಯ ಬಳಿಯ ರಸ್ತೆ, ಹೀಗೆ ಹತ್ತಾರು ರಸ್ತೆಗಳು ಸಂಪೂರ್ಣ ಹದಗೆಟ್ಟು ಹೋಗಿವೆ. ವಾಹನ ಸವಾರರು ಮಹಾನಗರ ಪಾಲಿಕೆಗೆ ಹಾಗೂ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹಿಡಿಶಾಪ‌ ಹಾಕಿಯೇ ಮುಂದೆ ಸಾಗುತ್ತಿದ್ದಾರೆ. 

4 / 6
ಮೇ ಕೊನೆಗೆ ಮಳೆ ಬರುವ ಸಮಯದಲ್ಲೇ ಕಾಟಾಚಾರಕ್ಕೆ ರಸ್ತೆಗೆ ತೇಪೆ ಹಾಕಲಾಗುತ್ತು. ಆದರೆ ಜೂನ್‌ನಲ್ಲಿ ಮಳೆ ಬಂದಾಗ ರಸ್ತೆಗೆ ಹಾಕಿದ ತೇಪೆ ಕಿತ್ತು ಹೋಗಿ ಪಾಲಿಕೆ ಕರ್ಮಕಾಂಡ ಜನರಿಗೆ ಗೊತ್ತಾಗಿತ್ತು. ಇನ್ನು ರಸ್ತೆ ಅವ್ಯವಸ್ಥೆ ಖಂಡಿಸಿ‌ ಮಂಗಳವಾರದಂದು ಡಿವೈಎಫ್​ಐ ಸಂಘಟನೆ ಪ್ರತಿಭಟನೆಗೆ ನಿರ್ಧರಿಸಿದೆ.

5 / 6
ಒಟ್ಟಿನಲ್ಲಿ ರಸ್ತೆಯೇ ಸರಿ ಇಲ್ಲದ ಹೊರತು ಮಂಗಳೂರು ಸ್ಮಾರ್ಟ್ ಸಿಟಿ ಆದರೇನು ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನಾದರೂ ಮಳೆಗಾಲ ಮುಗಿಯುವವರೆಗೆ ತಾತ್ಕಾಲಿಕವಾದರೂ ಹೊಂಡ ಗುಂಡಿಗಳ ಪ್ಯಾಚ್ ವರ್ಕ್ ಮಾಡಬೇಕಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ