‘ಪೊನ್ನಿಯಿನ್ ಸೆಲ್ವನ್’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಕ್ತಾಯ ಆಗಿದೆ. ಎ.ಆರ್. ರೆಹಮಾನ್ ಅವರ ಸಂಗೀತ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.
ಈ ಬಹುನಿರೀಕ್ಷಿತ ಸಿನಿಮಾದಲ್ಲಿ ತಮಿಳು ಮತ್ತು ಹಿಂದಿ ಚಿತ್ರರಂಗದ ಅನೇಕ ಸ್ಟಾರ್ ಕಲಾವಿದರು ನಟಿಸಿದ್ದಾರೆ. ‘ಪೊನ್ನಿಯಿನ್ ಸೆಲ್ವನ್’ ಕಾದಂಬರಿ ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈ ವರ್ಷ ಸೆ.30ರಂದು ಅದ್ದೂರಿಯಾಗಿ ಈ ಚಿತ್ರ ರಿಲೀಸ್ ಆಗಲಿದೆ.
ಈ ಚಿತ್ರವನ್ನು ಕಾಲಿವುಡ್ನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್’ ನಿರ್ಮಾಣ ಮಾಡುತ್ತಿದೆ. ಇಡೀ ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ ಎಂಬುದಕ್ಕೆ ಈ ಪೋಸ್ಟರ್ಗಳು ಸಾಕ್ಷಿ ಒದಗಿಸುತ್ತಿವೆ. ಸೆ.30ಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುವಂತಾಗಿದೆ. ನಂದಿನಿ ಮತ್ತು ಮಂದಾಕಿನಿ ಎಂಬ ಎರಡು ಪಾತ್ರವನ್ನು ಐಶ್ವರ್ಯಾ ರೈ ಬಚ್ಚನ್ ಮಾಡುತ್ತಿದ್ದಾರೆ.
ಖ್ಯಾತ ನಟ ವಿಕ್ರಂ ಅವರು ಈ ಸಿನಿಮಾದಲ್ಲಿ ಆದಿತ್ಯ ಕರಿಕಾಳನ್ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಅವರ ಪೋಸ್ಟರ್ ನೋಡಿ ಅಭಿಮಾನಿಗಳು ವಾವ್ ಎನ್ನುತ್ತಿದ್ದಾರೆ. ಜಯಂ ರವಿ, ಕಾರ್ತಿ, ತ್ರಿಷಾ ಮುಂತಾದವರಿಂದಾಗಿ ಈ ಸಿನಿಮಾದ ತಾರಾ ಬಳಗ ದೊಡ್ಡದಾಗಿದೆ.
ತ್ರಿಷಾ ಅವರ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಕುಂದವಾಯಿ ಪಿರಟ್ಟಿಯಾರ್ ಪಾತ್ರವನ್ನು ತ್ರಿಷಾ ನಿಭಾಯಿಸುತ್ತಿದ್ದಾರೆ. ಈ ಪೋಸ್ಟರ್ಗಳನ್ನು ಕಂಡು ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಸದ್ಯ ಇವು ವೈರಲ್ ಆಗುತ್ತಿವೆ.