AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mantralayam Photos: ಚಿತ್ರಗಳಲ್ಲಿ ಕಣ್ತುಂಬಿಕೊಳ್ಳಿ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಆರಾಧನಾ ವೈಭವ

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ಮಠದ ಮೊಗಸಾಲೆಯನ್ನು (ಕಾರಿಡಾರ್) ಅದ್ಧೂರಿಯಾಗಿ ಸಿಂಗರಿಸಲಾಗಿದ್ದು, ಕಣ್ಣಿಗೆ ಹಬ್ಬ ಕೊಡುವ ದೃಶ್ಯಗಳು ಎಲ್ಲೆಲ್ಲಿಯೂ ಕಂಡುಬರುತ್ತಿವೆ. ಈ ಬಾರಿ ರಾಯರ 351ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

TV9 Web
| Edited By: |

Updated on:Aug 11, 2022 | 12:52 PM

Share
ಮಂತ್ರಾಲಯ ರಾಘವೇಂದ್ರ ಸ್ವಾಮಿಗಳು 351ನೇ ಆರಾಧನಾ ಮಹೋತ್ಸವ

Mantralaya Raghavendra Swamy Aradhane

1 / 8
ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಮಂತ್ರಾಲಯದಲ್ಲಿ ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

Mantralaya Raghavendra Swamy Aradhane Scuptures in Corridor Attracting

2 / 8

Mantralaya Raghavendra Swamy Aradhane Scuptures in Corridor Attracting

ಆರಾಧನೆ ಪ್ರಯುಕ್ತ ಭಕ್ತರು ಶ್ರೀಮಠಕ್ಕೆ ಪಡಿ ಅರ್ಪಿಸಿದರು.

3 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಭಕ್ತರು ಅರ್ಪಿಸಿದ ಪಡಿಯನ್ನು ಪೀಠಾಧೀಶ ವಿಬುಧೇಂದ್ರ ಸ್ವಾಮೀಜಿ ಸ್ವೀಕರಿಸಿದರು.

4 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ರಾಮಾಯಣ, ಮಹಾಭಾರತ, ರಾಘವೇಂದ್ರ ಸ್ವಾಮಿಗಳ ಚರಿತ್ರೆ, ಭಾಗವತ ಕಥೆಗಳನ್ನು ಬಿಂಬಿಸುವ ಶಿಲ್ಪಗಳನ್ನು ಈ ಮಾರ್ಗದಲ್ಲಿ ಅಳವಡಿಸಿರುವ ಮಠದ ಮೊಗಸಾಲೆ ಎಲ್ಲರ ಗಮನ ಸೆಳೆಯುತ್ತಿದೆ.

5 / 8
Mantralaya Raghavendra Swamy Aradhane Scuptures in Corridor Attracting

ತಿರುವನಂತಪುರಂನ ಮೂರು ದ್ವಾರಗಳಂತೆ, ಮಂತ್ರಾಲಯದಲ್ಲೂ ಕಮಾನು ದ್ವಾರಗಳನ್ನು ನಿರ್ಮಿಸಲಾಗಿದೆ. ಮುಖ ಮಂಟಪವನ್ನು ಎರಡು ಅಂತಸ್ತಿನಿಂದ, ಮೂರು ಅಂತಸ್ತಿಗೆ ಮಾರ್ಪಾಡಿಸಲಾಗಿದೆ.

6 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಮೊಗಸಾಲೆಯ ಉಬ್ಬುಶಿಲ್ಪಗಳು ಎಲ್ಲರ ಗಮನ ಸೆಳೆಯುತ್ತಿವೆ. ವಿವಿಧ ಬಣ್ಣಗಳ ವಿದ್ಯುತ್ ದೀಪಗಳು, ಹೂವಿನ ಅಲಂಕಾರ, ಬೆಳ್ಳಿ ಮತ್ತು ಬಂಗಾರದ ರಥಗಳು ಎಲ್ಲರ ಗಮನ ಸೆಳೆಯುತ್ತಿವೆ.

7 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಆರಾಧನೆ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಯರ ಬೃಂದಾವನಕ್ಕೆ ನಮಿಸಿದರು.

8 / 8

Published On - 12:47 pm, Thu, 11 August 22

TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ