ಬೆಳ್ಳಿ ಪದಕ ಗೆದ್ದ ನೀರಜ್​ಗೆ 4 ಕೋಟಿ ರೂ: ಕಂಚಿನ ಪದಕ ಗೆದ್ದ ಮನು ಭಾಕರ್​ಗೆ 5 ಕೋಟಿ ರೂ. ಬಹುಮಾನ

|

Updated on: Aug 19, 2024 | 1:23 PM

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಪರ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಹರಿಯಾಣ ಸರ್ಕಾರ ಘೋಷಿಸಿದ ಬಹುಮಾನ ಮೊತ್ತದಲ್ಲಿ ಮನು ಭಾಕರ್ ಅವರಿಗೆ 5 ಕೋಟಿ ರೂ. ನೀಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಅವರ ಸಾಧನೆ. ಏಕೆಂದರೆ ಮನು ಭಾಕರ್ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದಿರುವ ಕಾರಣ ಅವರಿಗೆ ಹೆಚ್ಚಿನ ಮೊತ್ತ ನೀಡಲಾಗಿದೆ ಎಂದು ಹರಿಯಾಣ ಸರ್ಕಾರ ತಿಳಿಸಿದೆ.

1 / 5
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ. ಈ ಬಹುಮಾನ ಮೊತ್ತದಲ್ಲಿ ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಪಡೆದರೆ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

2 / 5
ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿರುವ ಕಾರಣ ಮನು ಭಾಕರ್​ಗೆ 5 ಕೋಟಿ ರೂ. ನೀಡಲಾಗಿದೆ.

3 / 5
ಇನ್ನು ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರಿಗೆ 4 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿದೆ. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಎಸೆಯಲಷ್ಟೇ ಶಕ್ತರಾದರು. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದರು.

4 / 5
ಇನ್ನು ಮನು ಭಾಕರ್ ಅವರ ಜೊತೆಗೂಡಿ ಏರ್ ಪಿಸ್ತೂಲ್ ಮಿಶ್ರ ಶೂಟಿಂಗ್​​ನಲ್ಲಿ ಕಂಚಿನ ಪದಕ ಗೆದ್ದಿದ್ದ ಸರಬ್ಜೋತ್ ಸಿಂಗ್ ಅವರಿಗೆ ಹರಿಯಾಣ ಸರ್ಕಾರ 2.5 ಕೋಟಿ ಬಹುಮಾನ ನೀಡಿದೆ.

5 / 5
ಹಾಗೆಯೇ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರಿಗೂ 2.50 ಕೋಟಿ ರೂ. ಬಹುಮಾನ ನೀಡಲಾಗಿದೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಿಂಚಿರುವ ರಾಜ್ಯದ ಆಟಗಾರರಿಗೆ ಹರಿಯಾಣ ಸರ್ಕಾರ ಕೋಟಿ ಮೊತ್ತವನ್ನು ನೀಡಿ ಪ್ರೋತ್ಸಾಹಿಸಿದೆ.