Manu Bhaker: ಒಲಿಂಪಿಕ್ಸ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಮನು ಭಾಕರ್

|

Updated on: Jul 31, 2024 | 3:20 PM

Manu Bhaker-Sarabjot Singh: ಪ್ಯಾರಿಸ್ ಒಲಿಂಪಿಕ್ಸ್​ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿದೆ. ಮೂರನೇ ಸ್ಥಾನಕ್ಕಾಗಿ ನಡೆದ ಈ ಸ್ಪರ್ಧೆಯಲ್ಲಿ ರಿಪಬ್ಲಿಕ್ ಆಫ್ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ಅವರನ್ನು 16-10 ಅಂತರದಿಂದ ಸೋಲಿಸಿ ಮನುಭಾಕರ್-ಸರಬ್ಜೋತ್ ಸಿಂಗ್ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ.

1 / 5
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಶೂಟರ್ ಮನು ಭಾಕರ್ (Manu Bhaker) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಬ್ಯಾಕ್ ಟು ಬ್ಯಾಕ್ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಎಂಬುದು ವಿಶೇಷ. ಅಂದರೆ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತದ ಯಾವುದೇ ಸ್ಪರ್ಧಿ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದಿರಲಿಲ್ಲ. ಆದರೆ ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಮನು ಭಾಕರ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.

2 / 5
ಮನು ಭಾಕರ್ ಮಹಿಳಾ ಸಿಂಗಲ್ಸ್​ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಅಲಂಕರಿಸುವ ಮೂಲಕ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತದ ಪದಕದ ಖಾತೆ ತೆರೆದಿದ್ದರು.

3 / 5
ಇದೀಗ ಪ್ಯಾರಿಸ್ ಒಲಿಂಪಿಕ್ಸ್​ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಮನುಭಾಕರ್ ಅವರು ಸರಬ್ಜೋತ್ ಸಿಂಗ್ ಜೊತೆಗೂಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.

4 / 5
22 ವರ್ಷದ ಮನು ಭಾಕರ್ 2023ರ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಇದಕ್ಕೂ ಮುನ್ನ ಏಷ್ಯನ್ ಗೇಮ್ಸ್ 2022 ರಲ್ಲೂ 25 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅಲ್ಲದೆ ಏಷ್ಯನ್ ಶೂಟಿಂಗ್​ ಚಾಂಪಿಯನ್​ಶಿಪ್​ನ 25 ಮೀಟರ್ ಏರ್ ಪಿಸ್ತೂಲ್​ ಸ್ಪರ್ಧೆಯ ಮೂಲಕವೇ ಪ್ಯಾರಿಸ್ ಒಲಿಂಪಿಕ್ಸ್​ಗೆ ಅರ್ಹತೆಗಿಟ್ಟಿಸಿಕೊಂಡಿದ್ದರು.

5 / 5
ಇದೀಗ 10 ಮೀಟರ್ ಏರ್​ ಪಿಸ್ತೂಲ್​ ಸ್ಪರ್ಧೆಗಳಲ್ಲಿ ಮನು ಭಾಕರ್ ಕಂಚಿನ ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು 25 ಮೀಟರ್ ಏರ್ ಪಿಸ್ತೂಲ್​ ಸ್ಪರ್ಧೆಯಲ್ಲಿ ಕಣಕ್ಕಿಳಿಯಬೇಕಿದ್ದು, ಹೀಗಾಗಿ ಈ ಸ್ಪರ್ಧೆಯಲ್ಲಿ ವಿಶ್ವ ಚಾಂಪಿಯನ್ ಮನು ಭಾಕರ್ ಕಡೆಯಿಂದ ಚಿನ್ನದ ಪದಕವನ್ನು ನಿರೀಕ್ಷಿಸಬಹುದು.

Published On - 2:10 pm, Tue, 30 July 24