Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡಿಸೇಲ್ ಹಾಕಬೇಕಿಲ್ಲ, ಚಾರ್ಜ್​ ಕೂಡ ಮಾಡಬೇಕಿಲ್ಲ: ಇದು ಮಾರುತಿ ಸುಜುಕಿ ಹೊಸ ಕಾರು

Maruti Suzuki: ಜಪಾನಿನ ಟೊಯೋಟಾ ಕಂಪೆನಿಯ ಜೊತೆಗೂಡಿ ಮಾರುತಿ ಸುಜುಕಿ ಈ ಹೈಬ್ರಿಡ್​ ಎಲೆಕ್ಟ್ರಿಕ್ ಕಾರನ್ನು ನಿರ್ಮಿಸುತ್ತಿದ್ದು, ಮುಂದಿನ ತಿಂಗಳಿನಿಂದ ಕೆಲವು ಎಲೆಕ್ಟ್ರಿಕ್ ವಾಹನಗಳ ಜಂಟಿ ಪರೀಕ್ಷೆ ನಡೆಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Aug 29, 2021 | 2:48 PM

 ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯೇರಿಕೆಯ ಬೆನ್ನಲ್ಲೇ ಎಲೆಕ್ಟ್ರಿಕ್ ವಾಹನಗಳು ಸಂಚಲನ ಸೃಷ್ಟಿಸಲು ಆರಂಭಿಸಿದೆ. ಈಗಾಗಲೇ ಬಹುತೇಕ ಕಂಪೆನಿಗಳು ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸಲು ಮುಂದಾಗಿದೆ. ಆದರೆ ಇತ್ತ ಪ್ರಸ್ತುತ ರಸ್ತೆಗಿಳಿದಿರುವ ವಾಹನಗಳನ್ನು ಚಾರ್ಜ್​ ಮಾಡಿಕೊಳ್ಳಲು ಸೂಪರ್ ಫಾಸ್ಟ್ ಚಾರ್ಜಿಂಗ್ ಸ್ಟೇಷನ್​ಗಳಿಲ್ಲ ಎಂಬ ಕೊರಗು ಗ್ರಾಹಕರಲ್ಲಿದೆ. ಈ ಎಲ್ಲಾ ಕುಂದು-ಕೊರತೆಗಳನ್ನು ಮನಗಂಡಿರುವ ಮಾರುತಿ ಸುಜುಕಿ ಕಂಪೆನಿ ಹೊಸ ಮಾದರಿಯ ಕಾರನ್ನು ಪರಿಚಯಿಸಲು ಮುಂದಾಗಿದೆ.

1 / 6
 ಹೌದು, ಟಾಟಾ ಮೋಟಾರ್ಸ್, ಮಹೀಂದ್ರಾ ಮತ್ತು ಹ್ಯುಂಡೈ ಹಾಗೂ ಇತರ ಕಂಪನಿಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳ ವಿಷಯದಲ್ಲಿ ಮಾರುತಿ ಕಂಪೆನಿ ಹಿಂದೆ ಉಳಿದಿದೆ ಎಂದೇ ಹೇಳಬಹುದು. ಆದರೆ ಈ ಹಿಂದೆ ಉಳಿಯುವಿಕೆಗೂ ಒಂದು ಕಾರಣವಿದೆ ಎಂದಿದ್ದಾರೆ ಮಾರುತಿ-ಸುಜುಕಿ. ಕಂಪೆನಿಯು ಹೊಸ ಮಾದರಿಯ ಹೈಬ್ರಿಡ್ ಎಲೆಕ್ಟ್ರಿಕ್ ಕಾರನ್ನು (ಎಚ್‌ಇವಿ) ನಿರ್ಮಿಸುತ್ತಿದೆ. ಈ ಕಾರಿನ ವಿಶೇಷತೆ ಎಂದರೆ ಇದಕ್ಕೆ ಪೆಟ್ರೋಲ್-ಡೀಸೆಲ್ ಬೇಕಿಲ್ಲ. ಹಾಗೆಯೇ ಚಾರ್ಜ್​ ಕೂಡ ಮಾಡಬೇಕಿಲ್ಲ. ಮತ್ತೇಗೆ ಚಲಿಸಲಿದೆ ಎಂಬ ಪ್ರಶ್ನೆಗೆ ಕಂಪೆನಿ ನೀಡುವ ಉತ್ತರ ಈ ಕಾರಿನ ಬ್ಯಾಟರಿಗಳು  ಸ್ವಯಂ ಚಾಲಿತವಾಗಿ ಚಾರ್ಜ್​ ಆಗಲಿದೆ.

2 / 6
ಅಂದರೆ ವಾಹನವನ್ನು ಓಡಿಸುವಾಗ ಬ್ಯಾಟರಿಗಳು ಆಟೋಮ್ಯಾಟಿಕ್ ಚಾರ್ಜ್ ಆಗಲಿದ್ದು, ಅದರಂತೆ ಇಂಧನ ತುಂಬಿಸದೇ ಅಥವಾ ಚಾರ್ಜ್ ಸ್ಟೇಷನ್​ಗೆ ಹೋಗದೇ ಕಾರನ್ನು ಓಡಿಸುತ್ತಲೇ ಇರಬಹುದು. ಇದರಿಂದ ಇಂಧನದ ಖರ್ಚು-ವೆಚ್ಚ ಕೂಡ ವಾಹನ ಬಳಕೆದಾರರಿಗೆ ಉಳಿತಾಯವಾಗಲಿದೆ.

3 / 6
ಈ ಕಾರುಗಳಲ್ಲಿ, ಎಲೆಕ್ಟ್ರಿಕ್ ಚಾರ್ಜಿಂಗ್​ಗಾಗಿ ರಚಿಸಲಾದ ವಿಶೇಷ​ ಇಂಟರ್ನಲ್ ಕಂಬುಷ್ಟನ್ ಎಂಜಿನ್ (ICE-electrified vehicles) ನೀಡಲಾಗುತ್ತಿದ್ದು, ಇದು ಬ್ಯಾಟರಿಗಳಿಗೆ ಪವರ್ ನೀಡುತ್ತದೆ. ಅಂದರೆ ವಾಹನದ ಚಕ್ರದ ತಿರುಗುವಿಕೆಯ ಜೊತೆಗೆ ಕಾರಿನಲ್ಲಿ ನೀಡಲಾಗಿರುವ ಬ್ಯಾಟರಿಗಳು ಆಟೋಮ್ಯಾಟಿಕ್ ಆಗಿ ಚಾರ್ಜ್​ ಆಗುತ್ತದೆ. ಇದರಿಂದ ಬ್ಯಾಟರಿ ಚಾರ್ಜ್​ಗಾಗಿ ಬೇರೆ ಪಾವತಿಸಬೇಕಾಗಿಲ್ಲ.

4 / 6
ಜಪಾನಿನ ಟೊಯೋಟಾ ಕಂಪೆನಿಯ ಜೊತೆಗೂಡಿ ಮಾರುತಿ ಸುಜುಕಿ ಈ ಹೈಬ್ರಿಡ್​ ಎಲೆಕ್ಟ್ರಿಕ್ ಕಾರನ್ನು ನಿರ್ಮಿಸುತ್ತಿದ್ದು, ಮುಂದಿನ ತಿಂಗಳಿನಿಂದ ಕೆಲವು ಎಲೆಕ್ಟ್ರಿಕ್ ವಾಹನಗಳ ಜಂಟಿ ಪರೀಕ್ಷೆ ನಡೆಸಲಿದ್ದೇವೆ ಎಂದು ಮಾರುತಿ ಸುಜುಕಿ ಕಂಪೆನಿಯ ಕಾರ್ಪೊರೇಟ್ ಕಾರ್ಯನಿರ್ವಾಹಕ ನಿರ್ದೇಶಕ ರಾಹುಲ್ ಭಾರತಿ ತಿಳಿಸಿದ್ದಾರೆ.

5 / 6
ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಮೂಲಸೌಕರ್ಯವು ದೇಶದಲ್ಲಿ ಉತ್ತಮವಾಗಿ ಅಭಿವೃದ್ಧಿ ಹೊಂದಿಲ್ಲದಿದ್ದರೆ, ಸ್ವಯಂ-ಚಾರ್ಜಿಂಗ್ ತಂತ್ರಜ್ಞಾನವು ಉತ್ತಮ ಆಯ್ಕೆಯಾಗಿದೆ. ಅದನ್ನು ಗಮನದಲ್ಲಿಟ್ಟುಕೊಂಡು, ನಾವು ಹೈಬ್ರಿಡ್ ಎಲೆಕ್ಟ್ರಿಕ್ ಕಾರಿನ ಅಭಿವೃದ್ಧಿಯತ್ತ ಗಮನ ಹರಿಸುತ್ತಿದ್ದೇವೆ ಎಂದು ರಾಹುಲ್ ತಿಳಿಸಿದ್ದಾರೆ.

6 / 6

Published On - 8:54 pm, Mon, 23 August 21

Follow us
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್

ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್

‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?

ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್