- Kannada News Photo gallery Maruti Suzuki unveiled its Fronx SUV at the Auto Expo 2023, check out features, specs and images
Auto Expo 2023: ಮಾರುತಿ ಸುಜುಕಿ ಹೊಸ ಫ್ರಾಂಕ್ಸ್ ಕೂಪೆ ಎಸ್‌ಯುವಿ ಅನಾವರಣ
ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಫ್ರಾಂಕ್ಸ್ ಕೂಪೆ ಎಸ್‌ಯುವಿ ಆವೃತ್ತಿಯನ್ನು 2023ರ ದೆಹಲಿ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದೆ. ಹೊಸ ಕಾರು ಮುಂಬರುವ ಏಪ್ರಿಲ್ ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದ್ದು, ಹೊಸ ಕಾರು ಮಧ್ಯಮ ಗಾತ್ರದ ಎಸ್ ಯುವಿ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
Updated on:Jan 12, 2023 | 9:45 PM

ಹೊಸ ಗ್ರ್ಯಾಂಡ್ ವಿಟಾರಾ ಮತ್ತು ಬಲೆನೊ ಹ್ಯಾಚ್‌ಬ್ಯಾಕ್ ಕಾರುಗಳ ವಿನ್ಯಾಸ ಪ್ರೇರಣೆಯೊಂದಿಗೆ ಹೊಸ ಫ್ರಾಂಕ್ಸ್ ಕೂಪೆ ಎಸ್‌ಯುವಿಯನ್ನು ಅಭಿವೃದ್ದಿಪಡಿಸಲಾಗಿದೆ.

ಫ್ರಾಂಕ್ಸ್ ಕೂಪೆ ಎಸ್‌ಯುವಿಯನ್ನು ಪ್ರೀಮಿಯಂ ಕಾರು ಮಾರಾಟ ಮಳಿಗೆಯಾದ ನೆಕ್ಸಾ ಮಾತ್ರ ಮಾರಾಟ ಮಾಡಲಾಗುತ್ತದೆ.

ಹೊಸ ಕಾರಿನಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಎರಡು ಮಾದರಿಯ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿವೆ.

ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.0 ಲೀಟರ್ ಬೂಸ್ಟರ್ಜೆಟ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 1.2 ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿವೆ.

ಆಕರ್ಷಕ ಸಿಗ್ನೇಚರ್ ಗ್ರಿಲ್ ಮತ್ತು ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟಪ್‌ನಿಂದ ಸ್ಲಿಮ್ ಎಲ್‌ಇಡಿ ಡಿಆರ್‌ಎಲ್ ನೊಂದಿಗೆ ಫ್ಲೇರ್ಡ್ ವ್ಹೀಲ್ ಆರ್ಚ್, ಅಲಾಯ್ ವೀಲ್ಹ್ ಗಳು, ರೈಸ್ಡ್ ವೇಸ್ಟ್‌ಲೈನ್, ಕೂಪೆ ತರಹದ ರೂಫ್‌ಲೈನ್ ಹೊಂದಿದೆ.

ಹೊಸ ಕಾರಿನಲ್ಲಿ ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ, ಅರ್ಟೆನ್ ಬ್ರೌನ್, ಒಪ್ಯುಲೆಂಟ್ ರೆಡ್ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ 6 ಮೊನೊಟೋನ್ ಬಣ್ಣಗಳ ಆಯ್ಕೆ ನೀಡಲಾಗಿದೆ.

ಫ್ರಾಂಕ್ಸ್ ಕಾರಿನಲ್ಲಿ ಸಿಂಗಲ್ ಟೋನ್ ಜೊತೆ ಡ್ಯುಯಲ್-ಟೋನ್ ಬಣ್ಣಗಳಾದ ಅರ್ಥನ್ ಬ್ರೌನ್ ಜೊತೆ ಬ್ಲ್ಯಾಕ್, ಸ್ಪ್ಲೆಂಡಿಡ್ ಸಿಲ್ವರ್ ಜೊತೆ ಬ್ಲ್ಯಾಕ್ ಮತ್ತು ಒಪ್ಯುಲೆಂಟ್ ರೆಡ್ ಜೊತೆ ಬ್ಲ್ಯಾಕ್ ಬಣ್ಣಗಳ ಆಯ್ಕೆ ನೀಡಲಾಗಿದೆ.

ಹೊಸ ಕಾರಿನಲ್ಲಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆ ವೈರ್‌ಲೆಸ್ ಆ್ಯಪಲ್ ಕಾರ್ ಪ್ಲೇ ಜೊತೆ ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ, ಸುಜುಕಿ ಕನೆಕ್ಟ್ ಮತ್ತು ವಾಯ್ಸ್ ಕಮಾಂಡ್, ಡಿಜಿಟಲ್ ಕನ್ಸೋಲ್, ಮಲ್ಟಿ-ಫಂಕ್ಷನಲ್ ಸ್ಟೀರಿಂಗ್ ವ್ಹೀಲ್, ವೈರ್‌ಲೆಸ್ ಚಾರ್ಜಿಂಗ್, ಹೆಡ್ಸ್-ಅಪ್ ಡಿಸ್ಪ್ಲೇ ಸೇರಿ 360 ಡಿಗ್ರಿ ಕ್ಯಾಮೆರಾ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳಿವೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ರೆನಾಲ್ಟ್ ಕೈಗರ್ ಮತ್ತು ನಿಸ್ಸಾನ್ ಮಾಗ್ನೈಟ್ ಕಾರುಗಳಿಗೆ ಪೈಪೋಟಿಯಾಗಲಿರುವ ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 8 ಲಕ್ಷದಿಂದ ರೂ. 11 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.
Published On - 9:45 pm, Thu, 12 January 23



















